ತುಮಕೂರು: ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಕೈಗೊಳ್ಳಲಾಗುತ್ತಿರುವ ಎಲ್‌ಇಡಿ ಲೈಟಿಂಗ್ ಹಾಗೂ ಸೌಂದರ್ಯೀಕರಣ ಕಾಮಗಾರಿಯನ್ನು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ್ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ವೃತ್ತದಲ್ಲಿ ಅಳವಡಿಸಲಾಗುತ್ತಿರುವ ಎಲ್‌ಇಡಿ ದೀಪಗಳ ವ್ಯವಸ್ಥೆ, ಬೆಳಕಿನ ವಿನ್ಯಾಸ, ವಿದ್ಯುತ್ ಸಂಪರ್ಕ ಹಾಗೂ ಕಾಮಗಾರಿಯ ಪ್ರಗತಿ ಮತ್ತು ಗುಣಮಟ್ಟದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

 

 

 

ವೃತ್ತದ ಸೌಂದರ್ಯವನ್ನು ಹೆಚ್ಚಿಸುವುದರ ಜೊತೆಗೆ ಸಾರ್ವಜನಿಕರಿಗೆ ಸುಗಮ, ಸುರಕ್ಷಿತ ಹಾಗೂ ಸುಂದರ ಸಂಚಾರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಳವಡಿಸಲಾಗುತ್ತಿರುವ ಎಲ್‌ಇಡಿ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅಗತ್ಯ ವಿದ್ಯುತ್ ಸಂಪರ್ಕ ಮತ್ತು ತಾಂತ್ರಿಕ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಬೇಕು. ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಕಾಮಗಾರಿಯಲ್ಲಿ ಯಾವುದೇ ರೀತಿಯ ಗುಣಮಟ್ಟದ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *