ಪಾವಗಡ: ಸಹಕಾರ ಕ್ಷೇತ್ರದಲ್ಲಿ ಸುಮಾರು ಐದು ದಶಕಗಳ ಕಾಲ ಅವಿರತ ಸೇವೆ ಸಲ್ಲಿಸಿದ ಪಾವಗಡದ ಹಿರಿಯ ಸಹಕಾರಿ ಮುಖಂಡ *ಶ್ರೀ ಚೆನ್ನಮಲ್ಲಪ್ಪ* ಅವರಿಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ *“ಸಹಕಾರ ರತ್ನ”* ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಇವರ ವತಿಯಿಂದ ನಿನ್ನೆ ದಿನಾಂಕ :14.11.2026 ರಂದು ಬೆಂಗಳೂರಿನ ಸರ್. ಎಂ. ವಿಶ್ವೇಶ್ವರಯ್ಯ ಭವನದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಚೆನ್ನಮಲ್ಲಪ್ಪ ಅವರು 29.08.1975 ರಂದು ವ್ಯವಸಾಯ ಸೇವಾ ಸಹಕಾರ ಸಂಘ ನಿ, ಪಾವಗಡ ಇದರ ಕಾರ್ಯದರ್ಶಿಯಾಗಿ ಸಹಕಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 2018 ರ ವರೆಗೆ ಕಾರ್ಯನಿರ್ವಹಿಸಿದ್ದಾರೆ. ನಂತರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿರ್ದೇಶಕರು ಹಾಗೂ ಅಧ್ಯಕ್ಷರಾಗಿ, ಹಾಲು ಉತ್ಪಾದಕರ ಸಹಕಾರ ಸಂಘ ಪಾವಗಡದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
2018 ರಿಂದ 2023 ರವರೆಗೆ ತುಮಕೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಅವರು, 2024 ರಲ್ಲಿ ಎರಡನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಇದಲ್ಲದೆ 2010-2015 ರವರೆಗೆ ತಾಲ್ಲೂಕು ಪಂಚಾಯತ್ ಸದಸ್ಯರಾಗಿ, 2016-2020 ರವರೆಗೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಹಾಗೂ ಸ್ಥಾಯಿ ಸಮಿತಿ ಸದಸ್ಯರಾಗಿ ಸಮಾಜ ಸೇವೆ ಮಾಡಿದ್ದಾರೆ. 2015 ರಲ್ಲಿ ಕೃಷಿಯಲ್ಲಿ ಸಾಧನೆ ಮಾಡಿದ್ದಕ್ಕಾಗಿ ಕನಕಶ್ರೀ ಪ್ರಶಸ್ತಿ ಪಡೆದಿದ್ದಾರೆ.
ಸಹಕಾರ ಕ್ಷೇತ್ರಕ್ಕೆ ಅವರು ಸಲ್ಲಿಸಿದ ದೀರ್ಘಕಾಲದ ನಿಸ್ವಾರ್ಥ ಸೇವೆಯನ್ನು ಗುರುತಿಸಿ “ಸಹಕಾರ ರತ್ನ” ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಅವರಿಗೆ ಈ ಪ್ರಶಸ್ತಿ ಲಭಿಸಿರುವುದಕ್ಕೆ ಪಾವಗಡ ತಾಲ್ಲೂಕಿನ ಸಹಕಾರಿ ಕ್ಷೇತ್ರದ ಮುಖಂಡರು, ರೈತರು ಹಾಗೂ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

What do you feel about this post?

67%
like

Like

33%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *