ಜಿಲ್ಲೆತುಮಕೂರು
Trending

ಸಂಸದ ಜಿ.ಎಸ್. ಬಸವರಾಜು ವಿರುದ್ಧ ಜೆಡಿಎಸ್ ಪ್ರತಿಭಟನೆ

ತುಮಕೂರು: ಗುಬ್ಬಿ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಎಸ್.ಆರ್.ಶ್ರೀನಿವಾಸ್ ಅವರನ್ನು ಅವ ಹೇಳನಕಾರಿಯಾಗಿ ಮಾತನಾಡಿರುವ ಲೋಕಸಭಾ ಸದಸ್ಯ ರಾದ ಜಿ.ಎಸ್.ಬಸವರಾಜು ವಿರುದ್ಧ ನಗರ ಮತ್ತು ಜಿಲ್ಲಾ ಜೆಡಿಎಸ್ ವತಿಯಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರ ದ ಬಿಜಿಎಸ್ ವೃತ್ತದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಜೆಡಿಎಸ್ ಕಾರ್ಯಕರ್ತರು, ಜಿ.ಎಸ್.ಬಸವರಾಜು ವಿ ರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜಿನಪ್ಪ, ಜೆಡಿಎಸ್ ಹಿರಿಯ ಮುಖಂಡರು ಹಾಲಿ ಶಾಸಕರಾದ ಎಸ್.ಆರ್.ಶ್ರೀನಿವಾಸ್ ಅವರು ಗುಬ್ಬಿ ಕ್ಷೇತ್ರದ ಅಭಿವೃದ್ದಿಗೆ ಸದಾ ಶ್ರಮಿಸುತ್ತಿದ್ದು, ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಇಂತಹವರ ಮೇಲೆ ಸಂಸದರು ಕೀಳುಮಟ್ಟದ ಭಾಷೆ ಬಳಸಿ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದರು.
ಜಿಲ್ಲೆಯಲ್ಲಿ ಜೆಡಿಎಸ ಪಕ್ಷವನ್ನು ಕಟ್ಟಿದಂತಹ ಮತ್ತು ಗುಬ್ಬಿ ಕ್ಷೇತ್ರಕ್ಕೆ ಹೇಮಾವತಿ ನೀರು ಹರಿಸಲು ಶ್ರಮಿಸಿರುವ ವಾಸಣ್ಣ ಅವರು ಯಾವುದೇ ಭ್ರಷ್ಟಾಚಾರವಿಲ್ಲದೆ, ಕಪ್ಪು ಚುಕ್ಕೆ ಇಲ್ಲದಂತೆ ಕ್ಷೇತ್ರದ ಅಭಿವೃದ್ದಿಗೆ ದುಡಿಯುತ್ತಿದ್ದಾರೆ. ಇಂತಹವರ ಬೆಳವಣಿಗೆಯನ್ನು ಸಹಿಸದೆ ಸಂಸದರು ಅವಹೇಳನ ಮಾಡಿರುವುದು ಅವರಿಗೆ ಶೋಭೆ ತರುವು ದಿಲ್ಲ ಎಂದು ಹೇಳಿದರು.
ಜಿಲ್ಲೆಗೆ ನಿಮ್ಮ ಕೊಡುಗೆಯಾದರೂ ಏನು ಎಂದು ಸಂಸದ ಜಿ.ಎಸ್. ಬಸವರಾಜು ಅವರನ್ನು ಪ್ರಶ್ನಿಸಿದರುವ ಆರ್.ಸಿ. ಆಂಜಿನಪ್ಪ ಅವರು, ಕೋವಿಡ್ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸಬೇಕಾಗಿದ್ದವರು ಎಲ್ಲಿದ್ದರು ಎಂದು ಪ್ರಶ್ನಿಸಿದರು.
ಗುಬ್ಬಿ ಕ್ಷೇತ್ರದಲ್ಲಿ ನಾಲ್ಕು ಭಾರಿ ಶಾಸಕರಾಗಿ ಆಯ್ಕೆಯಾಗಿ ರುವ ವಾಸಣ್ಣ ಅವರು ಐದನೇ ಭಾರಿಗೂ ಶಾಸಕರಾಗಿ ಹೆಚ್ಚು ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ ಎಂ ದು ಭವಿಷ್ಯ ನುಡಿದರು.
ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್. ನಾಗರಾಜು ಮಾತನಾಡಿ, ಗುಬ್ಬಿ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿರುವ ಶಾಸಕರಾದ ವಾಸಣ್ಣ ಅವರ ಬಗ್ಗೆ ಬಾಯಿಗೆ ಬಂದAತೆ ಮಾತನಾಡಿರುವ ಸಂಸದರ ಹೇಳಿಕೆ ಖಂಡನೀಯ, ನಿಮ್ಮ ಮಾತಿನ ಮೇಲೆ ಹಿಡಿತವಿರಬೇಕು, ನಾಲ್ಕು ಭಾರಿ ಗುಬ್ಬಿ ಕ್ಷೇತ್ರದಲ್ಲಿ ಶಾಸಕರಾಗಿ ಒಂದು ಭಾರಿ ಸಚಿವರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಅಂತಹವರನ್ನು ಗೌರವದಿಂದ ಕಾಣಬೇಕು ಎಂದು ಹೇಳಿದರು.
ಜೆಡಿಎಸ್ ನಗರಾಧ್ಯಕ್ಷ ಬೆಳ್ಳಿ ಲೋಕೇಶ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಎಲ್ಲರಿಗೂ ಆಹಾರದ ಕಿಟ್ಗಳನ್ನು ವಿತರಿಸಿ ಜನರ ನೆರವಿಗೆ ಆಸರೆ ಯಾಗಿದ್ದಾರೆ. ಕ್ಷೇತ್ರದ ಜನತೆಯ ಕಷ್ಟ ಸುಖಗಳನ್ನು ಆಲಿಸಿ ಅವರ ಸಮಸ್ಯೆಗಳನ್ನು ಬಗೆ ಹರಿಸುವ ಮೂಲಕ ಜನಮನ್ನಣೆ ಗಳಿಸಿದ್ದಾರೆ. ಇಂತಹ ಜನಪ್ರಿಯ ಶಾಸಕರ ವಿರುದ್ದ ಸಂಸದ ಜಿ.ಎಸ್. ಬಸವರಾಜು ಅವರು ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದರು.
ಗುಬ್ಬಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಗುರು ರೇಣುಕಾರಾಧ್ಯ ಮಾತನಾಡಿ, ಸುಳ್ಳನ್ನೇ ಮೈಗೂಡಿಸಿಕೊಂಡು ಜನರಿಗೆ ಸದಾ ಸುಳ್ಳು ಹೇಳುತ್ತಾ ಬಂದಿರುವ ಸಂಸದರು ಇತ್ತೀಚೆಗೆ ಗುಬ್ಬಿ ತಾಲ್ಲೂಕು ನಂದಿಹಳ್ಳಿ ಗ್ರಾಮದ ಕಾರ್ಯಕ್ರಮವೊಂದರಲ್ಲಿ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ಡ್ಯಾಂ ನಿರ್ಮಿಸಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ೫೫೦ ಕೋಟಿ ರೂ. ಬಿಡುಗಡೆಯಾಗಿದೆ. ಇದಕ್ಕಾಗಿ ರೈತರು ತಮ್ಮ ಜಮೀನುಗಳನ್ನು ಬಿಟ್ಟುಕೊಡಬೇಕು. ರೈತ ರಿಗೆ ಎಕರೆಗೆ ೮೦ ಲಕ್ಷ ರೂ.ನಿಂದ ೧ ಕೋಟಿ ರೂ.ವರೆಗೆ ಉತ್ತಮ ಬೆಲೆ ನೀಡಲಾಗುವುದು ಹೇಳುವಾಗ ನಮ್ಮ ಶಾಸಕರಾದ ಎಸ್.ಆರ್.ಶ್ರೀನಿವಾಸ್ ಅವರು ರೈತರಿಗೆ ಸುಳ್ಳು ಹೇಳಬೇಡಿ ಎಂದು ಸಂಸದರಿಗೆ ಹೇಳಿ ದ್ದಕ್ಕೆ, ಸಂಸದರು ಶಾಸಕರಿಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಕೂಡಲೇ ಶಾಸಕರ ಮತ್ತು ಕ್ಷೇತ್ರದ ಜನತೆಯ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರಾದ ಆರ್.ದೇವರಾಜು, ಗೆಳೆಯರ ಬಳಗದ ಜಿಲ್ಲಾಧ್ಯಕ್ಷ ಗೋವಿಂದ ರಾಜು ಮಾತನಾಡಿದರು. ಪಾಲಿಕೆ ಸದಸ್ಯರಾದ ನರಸಿಂಹಮೂರ್ತಿ, ಶ್ರೀನಿವಾಸ್, ಮಂಜುನಾಥ್, ಧರಣೇಂದ್ರಕುಮಾರ್, ಮುಖಂಡರಾದ ಗಂಗಣ್ಣ, ಜಾಂಗೀರ್ ರವೀಶ್, ನರಸಿಂಹರಾಜು, ಕೃಷ್ಣಮೂರ್ತಿ, ತಾಹೇರಾ ಕುಲ್ಸುಮ್, ಸುಲ್ತಾನ್ ಮಹಮ್ಮದ್, ಇಸ್ಮಾಯಿಲ್, ಕೃಷ್ಣಮೂರ್ತಿ, ಪ್ರಸನ್ನ, ಸೇರಿದಂತೆ ಜೆಡಿಎಸ್ ಮುಖಂಡರು ಕಾರ್ಯಕರ್ತರು ಇದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker