ತುಮಕೂರು: ರಾಜ್ಯದಲ್ಲಿ ಕೋವಿಡ್-೧೯ ಸೋಂಕಿನ ಆರ್ಭಟ ತಗ್ಗಿರುವ ಹಿನ್ನೆ ಲೆಯಲ್ಲಿ ಇಂದಿನಿAದ ೯ನೇ ತರಗತಿಯಿಂದ ೧೨ನೇ ತರಗತಿವರೆಗೆ ಶಾ ಲಾ-ಕಾಲೇಜುಗಳನ್ನು ಸರ್ಕಾರ ಆರಂಭಿಸಿದ್ದು, ಜಿಲ್ಲೆಯಲ್ಲೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ವಿದ್ಯಾ ರ್ಥಿಗಳು ಬೆನ್ನಿಗೆ ಬ್ಯಾಗ್ ತಗಲು ಹಾಕಿಕೊಂಡು ಖುಷಿಯಿಂದಲೇ ಹೆಜ್ಜೆ ಹಾಕಿದರು.
ಕಳೆದ ಒಂದೂವರೆ ವರ್ಷದಿಂದ ಕೊರೊನಾ ಮ ಹಾಮಾರಿಯ ಆರ್ಭಟದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮನೆಯಲ್ಲಿಯೇ ಆನ್ ಲೈನ್ ಪಾಠ ಕೇಳುತ್ತಿದ್ದರು. ಇದೀಗ ಸೋಂಕಿನ ಪ್ರಮಾಣ ತಗ್ಗಿರುವುದರಿಂದ ಸರ್ಕಾರ ೯ ರಿಂದ ೧೨ನೇ ತರಗತಿವರೆಗೆ ಭೌತಿಕ ತರಗತಿಗಳನ್ನು ಆರಂ ಭಿಸಿದೆ.
ಕಳೆದ ಒಂದೂವರೆ ವರ್ಷದಿಂದ ಮನೆಯಲ್ಲಿಯೇ ಆನ್‌ಲೈನ್ ಪಾಠ ಕೇಳುತ್ತಾ ಅರ್ಥೆÊಸಿಕೊಳ್ಳಲು ಸಾಧ್ಯವಾಗದಿದ್ದರೂ ವಿಧಿ ಇಲ್ಲದೆ ಮನೆಯಲ್ಲೇ ಉಳಿದಿದ್ದ ಮಕ್ಕಳು ಇಂದು ಆರಂಭವಾದ ಶಾಲಾ-ಕಾಲೇಜುಗಳ ಭೌತಿಕ ತರಗತಿಗಳಿಗೆ ಮಾಸ್ಕ್ ಧರಿಸಿ, ಸ್ಯಾನಿಟೈಸರ್‌ನೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಾ ಹಾಜರಾದರು.
ತರಗತಿಯ ಒಳಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ಡೆಸ್ಕ್ನಲ್ಲಿ ವಿದ್ಯಾರ್ಥಿಗಳು ಕುಳಿತಿದ್ದು, ತರಗತಿ ಮುಗಿಯುವವರೆಗೂ ಮಾಸ್ಕ್ ಧರಿಸಿಕೊಂಡೇ ಪಾಠ ಕೇಳಿದರು.
ಪ್ರತಿ ಶಾಲಾ ಕೊಠಡಿಯಲ್ಲಿ ೨೦ ಮತ್ತು ಅದಕ್ಕಿಂತ ಕಡಿಮೆ ಸಂಖ್ಯೆಯ ಮಕ್ಕಳು ಕೂರಲು ಮಾತ್ರ ಅವಕಾಶ ಮಾಡಿಕೊಡಲಾಗಿದೆ.
ನಗರದ ಎಂಪ್ರೆಸ್ ಕರ್ನಾಟ ಪಬ್ಲಿಕ್ ಶಾಲೆ, ಸಿದ್ದ ಗಂಗಾ ಮಹಿಳಾ ಪ.ಪೂ. ಕಾಲೇಜು, ವಿದ್ಯಾನಿ ಕೇತನ ಪ.ಪೂ. ಕಾಲೇಜು, ಸಿದ್ದಾರ್ಥ ಗ್ರಾಮಾಂತರ ಪ್ರೌಢಶಾಲೆ ಸೇರಿದಂತೆ ಜಿಲ್ಲೆಯಾದ್ಯಂತ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಆರಂಭವಾಗಿವೆ. ಈ ಎಲ್ಲ ಶಾಲಾ – ಕಾಲೇಜುಗಳಲ್ಲೂ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಖುಷಿ-ಖುಷಿಯಿಂದಲೇ ತರ ಗತಿಗಳತ್ತ ತೆರಳಿದ ದೃಶ್ಯಗಳು ಕಂಡು ಬಂದವು.
ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದರೆ, ಇನ್ನು ಕೆಲವು ಶಾಲಾ-ಕಾ ಲೇಜುಗಳಲ್ಲಿ ವಿದ್ಯಾರ್ಥಿಗಳ ಥರ್ಮಲ್ ಸ್ಕಿaನಿಂಗ್ ಮಾಡಿ, ಕೈಗೆ ಸ್ಯಾನಿಟೈಸರ್ ಹಾಕಿ ತರಗತಿಯ ಪ್ರವೇಶಕ್ಕೆ ಅವಕಾಶ ನೀಡಲಾಯಿತು.
ಕಳೆದ ಮರ‍್ನಾಲ್ಕು ದಿನಗಳಿಂದಲೇ ಶಾಲಾ-ಕಾಲೇಜುಗಳ ತರಗತಿಗಳ ಕೊಠಡಿಗಳನ್ನು ಸ್ವಚ್ಚ ಗೊಳಿಸಿ ಸಿದ್ದಪಡಿಸಲಾಗಿತ್ತು. ಗ್ರಾ.ಪಂ., ಪಟ್ಟಣ ಪಂಚಾಯ್ತಿಗಳ ನೆರವಿನೊಂದಿಗೆ ಕೊಠಡಿಗಳಲ್ಲಿ ಸ್ಯಾನಿಟೈಸ್ ಮಾಡಲಾಗಿತ್ತು.
ಕೊರೊನಾ ಸೋಂಕು ಪೂರ್ಣ ಪ್ರಮಾಣದಲ್ಲಿ ಕಡಿಮೆಯಾಗದೇ ಇರುವುದರಿಂದ ಶಾಲೆಗಳಲ್ಲಿ ಇನ್ನು ಬಿಸಿಯೂಟ ಆರಂಭಿಸುತ್ತಿಲ್ಲ. ಮಕ್ಕಳೇ ಮನೆ ಯಿಂದ ಊಟ, ಕುಡಿಯುವ ನೀರು ತರುವಂತೆ ತಿಳಿಸಲಾಗಿದೆ ಎಂದು ಡಿಡಿಪಿಐ ಸಿ. ನಂಜಯ್ಯ ತಿಳಿಸಿದ್ದಾರೆ.
ಶಿಕ್ಷಕರು ಹಾಗೂ ಶಾಲೆಗಳ ಬಹುತೇಕ ಸಿಬ್ಬಂದಿಗೆ ಲಸಿಕೆ ಹಾಕಿಸಲಾಗಿದೆ. ಲಸಿಕೆ ಹಾಕಿಸಿಕೊಂಡ ಶಿಕ್ಷಕರು ಮತ್ತು ಸಿಬ್ಬಂದಿ ಮಾತ್ರ ಕೆಲಸಕ್ಕೆ ಹಾಜರಾ ಗಬೇಕು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.