ಕುಣಿಗಲ್: ಕೆಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಯುವ ಸಂಕಲ್ಪ ಯಾತ್ರೆಯ ಅಂಗವಾಗಿ ಸೈಕಲ್ ರ್ಯಾಲಿಯನ್ನು ಆಯೋಜಿಸಲಾಗಿತ್ತು.
ಪಟ್ಟಣದ ಗ್ರಾಮದೇವತಾ ವೃತ್ತದಿಂದ ಅಮೃತೂರಿಗೆ ತೆರಳುವ ಸಂಕಲ್ಪ ಯಾತ್ರೆಯ ಸೈಕಲ್ ರ್ಯಾಲಿಗೆ ಚಾಲನೆ ನೀಡಿದ ರಾಜ್ಯ ಪಿಕಾರ್ಡ್ ಬ್ಯಾಂಕ್ ರಾಜ್ಯಾಧ್ಯಕ್ಷ ಡಿ.ಕೃಷ್ಣಕುಮಾರ್ ಅವರು ಮಾತನಾಡಿ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ನಡ್ಡಾ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಮಾಡಿರುವ ಅಭಿವೃದ್ಧಿ ಕೆಲಸಗಳ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ದೇಶದ ೭೫ನೇ ಸ್ವಾತಂತ್ರ‍್ಯೋತ್ಸವದ ಸವಿ ನೆನಪಿಗಾಗಿ ಪ್ರಚಾರ ಪಡಿಸುವ ನಿಟ್ಟಿನಲ್ಲಿ ಯುವಮೋರ್ಚಾದ ವತಿಯಿಂದ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ೭೫ ಕಿಮೀ ಮೂಲಕ ಸೈಕಲ್ ರ್ಯಾಲಿ ಮೂಲಕ ಯುವ ಸಂಕಲ್ಪ ಯಾತ್ರೆಯನ್ನು ಮಾಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಯುವ ಮೋರ್ಚಾದವರು ಯುವ ಸಂಕಲ್ಪ ಯಾತ್ರೆಯನ್ನು ಮಾಡಿ ಜನರಿಗೆ ಮನದಟ್ಟು ಮಾಡಿ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಬಲರಾಮ್, ಪ್ರಧಾನ ಕಾರ್ಯದರ್ಶಿ ದೇವರಾಜ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ವಿನಯ್ ಜೈನ್, ಕಾರ್ಯದರ್ಶಿ ಯಶಸ್, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಅನೂಪ್‌ಕುಮಾರ್, ತಾಲ್ಲೂಕು ಅಧ್ಯಕ್ಷ ಧನುಷ್ ಗಂಗಟ್ಕರ್, ಸಂದೀಪ್ ಸೇರಿದಂತೆ ಯುವ ಮೋರ್ಚದ ಸದಸ್ಯರು ಭಾಗವಹಿಸಿದ್ದರು.