ತುಮಕೂರು:ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯದವತಿಯಿಂದ ಸಂಘದ ಬಲವರ್ಧನೆಗಾಗಿ ಆಗಸ್ಟ್ 29 ರ ಭಾನುವಾರದಂದು ಒಂದು ದಿನ ಕಾರ್ಯಾಗಾರ ಹಾಗೂ ಅತಿ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಭಿನಂಧನಾ ಸಮಾರಂಭವನ್ನು ದಾವಣಗೆರೆಯ ಶಿವಪಾರ್ವತಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ನಗುತ ರಂಗನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯವನ್ನು ರಾಜ್ಯ ಮಟ್ಟದಲ್ಲಿ ಬಲಪಡಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಕಾರ್ಯಾಗಾರವನ್ನು ಮಾಜಿ ಸಚಿವರ ಹಾಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಘಟನೆಯ ರಾಜ್ಯಾಧ್ಯಕ್ಷ ನಗುತಾ ರಂಗನಾಥ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೀಡ್ಕರ್ ಮಾಜಿ ಅಧ್ಯಕ್ಷ ಆರ್.ರಾಮಕೃಷ್ಣ, ಅರಗು ಮತ್ತು ಬಣ್ಣದ ಕಾರ್ಖಾನೆಯ ಮಾಜಿ ಅಧ್ಯಕ್ಷ ವೆಂಕಟೇಶ್ ಹೆಚ್.ವಿ., ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ, ಜವಳಿ ನಿಗಮದ ಮಾಜಿ ಅಧ್ಯಕ್ಷ ನಜೀರ್ ಅಹಮದ್, ನಿವೃತ್ತ ಎಸ್ಸ್ಪಿ ಎನ್.ರುದ್ರಮುನಿ,ಮುಖಂಡರಾದ ಆತೀಕ್ ಅಹಮದ್, ಚಲವಾದಿ ಶೇಖರಪ್ಪ, ಇಕ್ಬಾಲ್ ಅಹಮದ್ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ ಎಂದು ವಿವರ ನೀಡಿದರು.
ದಲಿತರ ಆಶಾಕಿರಣವಾಗಿರುವ ಡಾ.ಜಿ.ಪರಮೇಶ್ವರ್ ಒರ್ವ ಸಜ್ಜನ ರಾಜಕಾರಣಿಯಾಗಿದ್ದು, ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದವರು, ಅವರ ಹೆಸರಿನಲ್ಲಿ ಸಮಾಜ ಸೇವೆಗೆಂದು ಹುಟ್ಟಿಕೊಂಡಿರುವ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ, ಯುವಜನರನ್ನು ಸಂಘಟಿಸಿ, ಸಮಾಜದ ಒಳಿತಿಗಾಗಿ ಹಲವಾರು ಕಾರ್ಯಗಳನ್ನು ಮುಂದಾಗಿದ್ದು, ಇದರ ಭಾಗವಾಗಿ, ರಾಜ್ಯ ಮಟ್ಟದ ಈ ಕಾರ್ಯಗಾರವನ್ನು ಏರ್ಪಡಿಸಲಾಗಿದೆ ಎಂದು ನುಗುತಾ ರಂಗನಾಥ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯದ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷ ಜಬಿವುಲ್ಲಾ, ಕುಣಿಗಲ್ ತಾಲೂಕು ಅಧ್ಯಕ್ಷ ವರದರಾಜು, ಗುಬ್ಬಿ ತಾಲೂಕು ಅಧ್ಯಕ್ಷ ಸಿದ್ದೇಶ್, ಚೇತನ್, ಸಾಗರ್, ರಾಜ್ಯ ಕಾರ್ಯದರ್ಶಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.