ಜಿಲ್ಲೆತುಮಕೂರುರಾಜ್ಯ
Trending

ಚುನಾವಣೆ ಎದುರಿಸಲು ಕಾರ್ಯಕರ್ತರು ಸಿದ್ದರಾಗಬೇಕಿದೆ : ಸಲೀಂ ಅಹಮದ್

ತುಮಕೂರು:ಪ್ರಸ್ತುತ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದರೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಯಾವಾಗ ಬೇಕಾದರೂ ಬರಬಹುದು.ಹಾಗಾಗಿ ಕಾರ್ಯಕರ್ತರು, ಮುಖಂಡರು ಚುನಾವಣೆ ಎದುರಿಸಲು ಸಿದ್ದರಾಗಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು,ಮುಂದಿನ ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ,ತಾಲೂಕು ಪಂಚಾಯಿತಿ ಚುನಾವಣೆಗಳು ಎದುರಾಗಲಿವೆ.ಇದರ ಜೊತೆಗೆ,ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನಪರಿಷತ್ ಚುನಾವಣೆಯೂ ಎದುರಾಗಲಿದೆ.ಹಾಗಾಗಿ ಪಕ್ಷದ ಕಾರ್ಯಕರ್ತರು,ಮುಖಂಡರು, ಹೋಬಳಿ ಮತ್ತು ಬೂತ್ ಮಟ್ಟದಲ್ಲಿ ಯುವ ಕಾರ್ಯಪಡೆ ರಚಿಸಿಕೊಂಡು,ಪಕ್ಷದ ಪರ ಕೆಲಸ ಮಾಡುವ ಮೂಲಕ ಅತಿ ಹೆಚ್ಚು ಸ್ಥಾನ ಪಡೆಯುವಂತೆ ಮಾಡಬೇಕಾಗಿದೆ ಎಂದರು.
ಒಂದು ಕಾಲದಲ್ಲಿ ಜಿಲ್ಲೆಯಲ್ಲಿ ಪಕ್ಷ 13ರಲ್ಲಿ 9 ಸ್ಥಾನಗಳನ್ನು ಗೆದ್ದ ಉದಾಹರಣೆ ಇದೆ. ಈಗಲೂ ಪಕ್ಷ ಸದೃಢವಾಗಿದೆ.ಪಕ್ಷದ ಪರವಾಗಿ ಮುಖಂಡರಾದ ಡಾ.ಜಿ.ಪರಮೇಶ್ವರ್,ಟಿ.ಬಿ.ಜಯಚಂದ್ರ,ಕೆ.ಎನ್.ರಾಜಣ್ಣ ಸೇರಿದಂತೆ ಎಲ್ಲಾ ನಾಯಕರು ತಮ್ಮ ಶಕ್ತಿ ಮೀರಿ ದುಡಿಯುತ್ತಿದ್ದಾರೆ.ಅವರ ಹಾದಿಯಲ್ಲಿಯೇ ಇತರೆ ನಾಯಕರು ಸಹ ಪಕ್ಷವನ್ನು ಬಲಪಡಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಇದರ ಫಲವಾಗಿ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ.ನಾವು,ನೀವುಗಳೆಲ್ಲರೂ ಒಗ್ಗೂಡಿ ಈ ಕಾರ್ಯವನ್ನು ಯಶಸ್ವಿಗೊಳಿಸುವ ಗುರುತರ ಜವಾಬ್ದಾರಿ ನಮ್ಮಗೆಲ್ಲರ ಮೇಲಿದೆೆ ಎಂದು ಸಲೀಂ ಅಹಮದ್ ನುಡಿದರು.
ಕೋರೋನದಂತಹ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್ ಪಕ್ಷದ ಸಹಾಯಹಸ್ತ, ಆರೋಗ್ಯ ಹಸ್ತ ಕಾರ್ಯಕ್ರಮದ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ.ತಾವು ಮಾಡಿರುವ ಕೆಲಸ ಮತ್ತು ಸಂಗ್ರಹಿಸಿರುವ ಮಾಹಿತಿಗಳನ್ನು ಅದಷ್ಟು ಬೇಗ ಕೆಪಿಸಿಸಿಗೆ ಸಲ್ಲಿಸಬೇಕಿದೆ.ಇದು ಸರಕಾರದ ವಿರುದ್ದ ವಿರೋಧಪಕ್ಷಕ್ಕೆ ಸಿಗುವ ದೊಡ್ಡ ಸಾಕ್ಷವಾಗಿದೆ.ಕೋರೋನ ಸಾವು,ನೋವು,ಔಷಧಿ ಹಂಚಿಕೆ, ಪುಡ್ ಕಿಟ್ ಹಂಚಿಕೆ ಸೇರಿದಂತೆ ಎಲ್ಲ ವಿಭಾಗಗಳಲ್ಲಿಯೂ ಸರಕಾರ ಸುಳ್ಳು ಮಾಹಿತಿ ನೀಡುತ್ತಿದೆ. ಇಂತಹ ಹಸಿ ಸುಳ್ಳು ಹೇಳಿದ ಸರಕಾರದ ವಿರುದ್ದ ಹೋರಾಡಲು ಕಾರ್ಯಕರ್ತರು ನೀಡುವ ಈ ಮಾಹಿತಿ ಪ್ರಬಲ ಆಸ್ತçವಾಗಲಿದೆ ಎಂದರು.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರಕಾರಕ್ಕೆ ಜೀವವೇ ಇಲ್ಲ. ಇದೊಂದು ನಿಜೀರ್ವ ಸರಕಾರ. ಮಹಿಳೆಯರು, ಮಕ್ಕಳ ಮೇಲಿನ ಅತ್ಯಾಚಾರ ಏರು ಮುಖವಾಗಿದೆ. ಅಲ್ಲದೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದನ್ನು ತಹಬದಿಗೆ ತರಬೇಕಾದ ಗೃಹ ಸಚಿವರು ಉಡಾಫೆ ಉತ್ತರ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ.ಈ ಎಲ್ಲಾ ಅಂಶಗಳನ್ನು ಜನರ ಮುಂದಿಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಾಡಬೇಕಾಗಿದೆ ಎಂದು ಸಲೀಂ ಅಹಮದ್ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ತಿಳಿಸಿರುವಂತೆ ಕೋರೋನ ಸಂದರ್ಭದಲ್ಲಿ ಪಕ್ಷದ ವತಿಯಿಂದ ಕೈಗೊಂಡ ಸಹಾಯಹಸ್ತ ಮತ್ತು ಆರೋಗ್ಯ ಹಸ್ತ ಕಾರ್ಯಕ್ರಮಗಳು ಆಡಳಿತ ಪಕ್ಷದ ವಿರುದ್ದ ಹೋರಾಟ ನಡೆಸಲು ಪ್ರಬಲ ಆಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಇವುಗಳ ಜವಾಬ್ದಾರಿ ಹೊತ್ತಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಕೂಡಲೇ ಮಾಹಿತಿಯನ್ನು ಪಕ್ಷದ ಕಚೇರಿಗೆ ಸಲ್ಲಿಸಬೇಕು. ಇಲ್ಲದಿದ್ದ ಪಕ್ಷದಲ್ಲಿ ಅಂತಹ ಅಧ್ಯಕ್ಷರ ವಿರುದ್ದ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ತುಮಕೂರು ತಾಲೂಕು ಹಿರೇಹಳ್ಳಿ ಸಮೀಪದ ಚಿಕ್ಕಹಳ್ಳಿಯಲ್ಲಿ ನಡೆದಿರುವ ರೈತ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಆರೋಪಿಗಳನ್ನು ಬಂಧಿಸದ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಖಂಡಿಸಿ,ಸೆಪ್ಟAಬರ್ 02 ರಂದು 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ,ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು.ಎಲ್ಲಾ ಮುಖಂಡರು,ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳು ವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮನವಿ ಮಾಡಿದರು.
ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಸ್.ಷಪಿಅಹಮದ್, ಮಾಜಿ ಶಾಸಕ ಡಾ.ರಫೀಕ್ ಅಹಮದ್,ಕೆಪಿಸಿಸಿ ವಕ್ತಾರರಾದ ಮುರುಳೀಧರ ಹಾಲಪ್ಪ, ಯಲಚವಾಡಿ ನಾಗರಾಜು, ಚಂದ್ರಶೇಖರಗೌಡ, ಮರಿಚನ್ನಮ್ಮ, ಸುಜಾತ, ಪುಟ್ಟರಾಜು, ರೇವಣ್ಣಸಿದ್ದಯ್ಯ ಮತ್ತಿತರರು ಉಪಸ್ಥಿತರಿದ್ದರು

 

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker