
ತುಮಕೂರು: ಗ್ರಾಮಾಂತರ ಕ್ಷೇತ್ರದಲ್ಲಿ ಯುವ ಮೋರ್ಚಾವನ್ನು ಸಶಕ್ತವಾಗಿ ಸಂಘಟಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಕರೆ ನೀಡಿದರು.
ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊನ್ನುಡಿಕೆಯ ಚನ್ನಬಸವೇಶ್ವರ ದೇಗುಲದಲ್ಲಿ ನಡೆದ ಯುವ ಮೋರ್ಚಾ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ತಳಮಟ್ಟದಿಂದ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಪಕ್ಷ ಹಮ್ಮಿಕೊಂಡಿರುವ ಒನ್ ಬೂತ್ ಟೆನ್ ಯೂತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಪಕ್ಷಕ್ಕೆ ಬಲ ತುಂಬಬೇಕು ಎಂದು ಕರೆ ನೀಡಿದರು.
ಯುವ ಮೋರ್ಚಾಗೆ ಶಕ್ತಿ ತುಂಬಲು ಅಗತ್ಯವಾದ ಸಹಕಾರ ನೀಡುವುದಾಗಿ ಹೇಳಿದ ಅವರು, ಮುಂಬರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಯುವಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವುದಾಗಿ ತಿಳಿಸಿದರು.
ಬಿಜೆಪಿ ಪಕ್ಷವನ್ನು ಸಮರ್ಥವಾಗಿ ಕಟ್ಟುವ ನಿಟ್ಟಿನಲ್ಲಿ ಯುವ ಮೋರ್ಚಾ ಕಾರ್ಯಕರ್ತರ ಶ್ರಮ ಅಪಾರವಾಗಿದ್ದು, ಪಕ್ಷವನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಒನ್ ಬೂತ್ ಟೆನ್ ಯೂತ್ ಕಾರ್ಯಕ್ರಮದ ಸಮಾರೋಪಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕರೆತರುವುದಾಗಿ ಭರವಸೆ ನೀಡಿದರು.
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅರಕೆರೆ ರವೀಶ್ ಮಾತನಾಡಿ, ಪಕ್ಷವನ್ನು ಬಲ ಪಡಿಸುವ ನಿಟ್ಟಿನಲ್ಲಿ ರಾಜ್ಯ ಘಟಕ ನೀಡಿರುವ ಒನ್ ಬೂತ್ ಟೆನ್ ಯೂತ್ ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಮುಂದಾಗಬೇಕು ಎಂದು ಹೇಳಿದರು.
ಗ್ರಾಮಾಂತರ ಕ್ಷೇತ್ರದಲ್ಲಿರುವ 230 ಬೂತ್ ಗಳಲ್ಲಿ ಯುವಕರ ಪಡೆಯನ್ನು ಕಟ್ಟಬೇಕು, ಒಂದು ತಿಂಗಳೊಳಗೆ ಎಲ್ಲ ಬೂತ್ ಗಳಲ್ಲಿಯೂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಿಸಿ, ಎಲ್ಲ ಸದಸ್ಯರನ್ನು ಒಳಗೊಂಡAತೆ ಸಮಾವೇಶ ನಡೆಸುವ ಮೂಲಕ ಗ್ರಾಮಾಂತರ ಯುವ ಮೋರ್ಚಾವನ್ನು ಜಿಲ್ಲೆಗೆ ಮಾದರಿಯಾಗಿಸಬೇಕು ಎಂದು ಕರೆ ನೀಡಿದರು.
ಮುಂಬರುವ ವಿಧಾನಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಶ್ರಮವಹಿಸಬೇಕು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸುರೇಶ್ ಗೌಡ ಅವರನ್ನು ಬಹುಮತದಿಂದ ಗೆಲ್ಲಿಸುವ ನಿಟ್ಟಿನಲ್ಲಿ ಪಕ್ಷವನ್ನು ಬಲ ಪಡಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದರು.
ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಮದನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅರಕೆರೆ ರವೀಶ್, ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಶೇಖರ್, ಸುಮಿತ್ರಾ ದೇವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಸ್ವಾಮಿ, ಜಿಲ್ಲಾ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಹುಚ್ಚಯ್ಯ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರು ತಾಲ್ಲೂಕು ಉಸ್ತುವಾರಿ ಪರಮೇಶ್ ಹಾಗೂ ನವೀನ್ ಸೀತಾರಾಂ ನಾಯ್ಕ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ನವಚೇತನ,ಜಿಲ್ಲಾ ಯುವ ಮೋರ್ಚಾ ಖಜಾಂಚಿ ಶ್ರೀಧರ್ ತೋಟ್ಲುಕೆರೆ, ತಾಲ್ಲೂಕು ಅಧ್ಯಕ್ಷರಾದ ಶಂಕರ್, ಯುವ ಮೋರ್ಚಾ ತಾಲೋಕ್ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಚ್ಚಂಗಿ ಪಾಳ್ಯ ಹಾಗೂ ರಘು ಮಲ್ಲಸಂದ್ರ, ಕಾರ್ಯದರ್ಶಿ ಗಿರೀಶ್ ಮುಕುಲ್ ಹಾಗೂ ಕೊರಟಗೆರೆ ಯುವಮೋರ್ಚಾ ಖಜಾಂಚಿ ಚೇತನ್ ಹಾಗೂ ಯುವಮೋರ್ಚಾ ಕಾರ್ಯಕರ್ತರು ಭಾಗವಸಿದ್ದರು.