ಜಿಲ್ಲೆತುಮಕೂರುಸುದ್ದಿ
Trending

ದೇಶದ ಅಭಿವೃದ್ದಿಯಲ್ಲಿ ಶಿಕ್ಷಕರ ಸೇವೆ ಅತ್ಯಮೂಲ್ಯ: ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ

ಶಿರಾದಲ್ಲಿ ಸರ್ವಪಲ್ಲಿ ಡಾ.ರಾಧಕೃಷ್ಣನ್ ಜನ್ಮ ದಿನಾಚರಣೆ

ಶಿರಾ : ದೇಶದ ಅಭಿವೃದ್ದಿಯಲ್ಲಿ ಶಿಕ್ಷಕರ ಸೇವೆ ಅತ್ಯಮೂಲ್ಯ. ದೇಶ ಭವಿಷ್ಯ ರೂಪಿಸುವವರು ಶಿಕ್ಷಕರು. ಆದ್ದರಿಂದ ಶಿಕ್ಷಕರಿಗೆ ಇಡೀ ವಿಶ್ವದಲ್ಲಿಯೇ ಮಾತೃದೇವೋಭವ, ಪಿತೃ ದೇವೋಭವ, ಆಚಾರ್ಯದೇವೋಭವ ಎಂದು ಶಿಕ್ಷಕರನ್ನು ದೇವರಂತೆ ಪೂಜಿಸುವ ಕಾರ್ಯ ಮಾಡುತ್ತಿರುವುದು ನಮ್ಮ ದೇಶದಲ್ಲಿ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ಅವರು ನಗರದ ಸರಕಾರಿ ಬಾಲಕಿಯರ ಪ.ಪೂ. ಕಾಲೇಜಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಭವಿಷ್ಯ ರೂಪಿಸುವ ಶಿಕ್ಷಕರಿಗೆ ಗೌರವ ಸಮರ್ಪಣೆ ಮಾಡುವ ಉದ್ದೇಶದಿಂದ ಅದ್ವೈತ ವೇದಾಂತ ಸಿದ್ದಾಂತದಂತಹ ವಿಷಯದಲ್ಲಿ ಪರಿಣಿತಿ ಪಡೆದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು.
ವಿಧಾನಪರಿಷತ್ ಸದಸ್ಯ ಚಿದಾನಮದ್ ಎಂ.ಗೌಡ ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಕ್ಷಕರಿಗೆ ಪ್ರಸ್ತುತ ದಿನಮಾನಗಳಲ್ಲಿ ಸಿಗಬೇಕಾದ ಗೌರವ ಸಿಗುತ್ತಿಲ್ಲ. ಶಿಕ್ಷಣ ವ್ಯವಸ್ಥೆ ಸುಧಾರಿಸಬೇಕಿದೆ. ಸರಕಾರಿ ಶಾಲೆಗಳನ್ನು ಉನ್ನತೀಕರಿಸಬೇಕು. ಈ ನಿಟ್ಟಿನಲ್ಲಿ ಶಿರಾ ತಾಲ್ಲೂಕಿನಲ್ಲಿರುವ ಎಲ್ಲಾ ಸರಕಾರಿ ಶಾಲೆಗಳನ್ನು ಅಭಿವೃದ್ದಿಗೊಳಿಸಲು ಕ್ಷೇತ್ರದ ಶಾಸಕರೊಡಗೂಡಿ ಪ್ರಯತ್ನ ಮಾಡಲಾಗುವುದು ಎಂದರು.
ರಾಜ್ಯ ರೇಷ್ಮೆ ಉದ್ಯಮಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ ಮಾತನಾಡಿ ಭಾರತ ದೇಶದಲ್ಲಿ ಶಿಕ್ಷಕರಿಗೆ ತಾಯಿ ಮಕ್ಕಳ ಸಂಬಂಧದಂತೆ, ವಿದ್ಯಾರ್ಥಿ ಶಿಕ್ಷಕರ ಸಂಭಂದವಾಗಿದೆ. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರು ಮುಖ್ಯ ಪಾತ್ರ ವಹಿಸುತ್ತಾರೆ. ಯಾವ ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಉತ್ತಮವಾಗಿರುತ್ತದೆಯೋ ಅಂತಹ ದೇಶ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದುವರೆಯುತ್ತದೆ. ಯಾವ ದೇಶ ಶೈಕ್ಷಣಿಕವಾಗಿ ಉತ್ತಮವಾಗಿರುವುದಿಲ್ಲವೋ ಆ ದೇಶ ಹಿಂದುಳಿದಿರುತ್ತದೆ. ಆದ್ದರಿಂದ ನಮ್ಮ ದೇಶದಲ್ಲಿ ಶಿಕ್ಷಕರು ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅಭಿವೃದ್ದಿಗೆ ಮುಖ್ಯ ಪಾತ್ರ ವಹಿಸಬೇಕು ಎಂದರು.
ರಾಜ್ಯ ತೆಂಗು ಮತ್ತು ನಾರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ ತಾಯಿ ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವಂತೆ ಶಿಕ್ಷಕರು ವಿದ್ಯಾರ್ಥಿಗಳಿಗೆ ತಿದ್ದಿ ಬುದ್ದಿ ಹೇಳುವ ಮೂಲಕ ಅವನ ಭವಿಷ್ಯ ರೂಪಿಸುತ್ತಾರೆ. ಶಿರಾ ತಾಲ್ಲೂಕಿನಲ್ಲಿ ಇರುವ ಸರಕಾರಿ ಶಾಲೆಗಳನ್ನು ಅಭಿವೃದ್ದಿ ಮಾಡಬೇಕು. ಈ ನಿಟ್ಟಿನಲ್ಲಿ ಕ್ಷೇತ್ರದ ಶಾಸಕರುಗಳು ಕಾರ್ಯಪ್ರವೃತ್ತರಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಶಿರಾ ತಾಲ್ಲೂಕಿನ ಶೈಕ್ಷಣಿಕ ಹಿನ್ನೆಲೆ, ಸಾಧಕರ ಶಿಕ್ಷಕರು, ರಾಜಕೀಯ ತಜ್ಞರು ಸೇರಿದಂತೆ ವಿವಿದ ವಿಷಯಗಳ ಬಗ್ಗೆ ಶಿಕ್ಷಕ ಬರಹಗಾರರಿಂದ ಲೇಖನಗಳನ್ನು ಆಯ್ಕೆ ಮಾಡಿ ಹೊರತಂದಿರುವ ಶಿಕ್ಷಣ ಸಿರಿ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಪಟ್ಟನಾಯಕನಹಳ್ಳಿ ಶಾಲೆಯ ವಿದ್ಯಾರ್ಥಿನಿ ಲಾವಣ್ಯ ರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಮತ.ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ.ಟಿ.ಎಸ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕುಮಾರ್.ಎನ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗಂಗಾಧರ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಶೈಲಜಾ.ಎಸ್.ಎನ್, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮೀಶ್, ಖಜಾಂಚಿ ರಾಮಣ್ಣ, ಪ್ರಧಾನ ಕಾರ್ಯದರ್ಶಿ ಜೀವನ್ ಪ್ರಕಾಶ್, ಇಸಿಓ ಜನಾರ್ಧನ್, ಚಂದ್ರಶೇಖರ್ ಸೇರಿದಂತೆ ಹಲವರು ಹಾಜರಿದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker