
ಶಿರಾ : ಶಿರಾ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ರಾಜಾ ಕಸ್ತೂರಿ ರಂಗಪ್ಪನಾಯಕನ ಹೆಸರಿಡಲು ಮುಖ್ಯಮಂತ್ರಿಗಳೊAದಿಗೆ ಚರ್ಚೆ ನಡೆಸಿ ಶೀಘ್ರ ತೀರ್ಮಾನ ಮಾಡುತ್ತೇನೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ಅವರು 75ನೇ ಭಾರತ ಸ್ವಾತಂತ್ರö್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಶಿರಾದ ರಾಜಾ ಕಸ್ತೂರಿ ರಂಗಪ್ಪನಾಯಕ ಕೋಟೆಗೆ ಭೇಟಿ ನೀಡಿ ಮಾತನಾಡಿದರು. ಶಿರಾ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ರಾಜಾ ಕಸ್ತೂರಿ ರಂಗಪ್ಪನಾಯಕನ ಹೆಸರಿಡಬೇಕೆಂದು ಹಲವು ದಿನಗಳಿಂದ ಮನವಿ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿ ಸಾದಕಬಾಧಕಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದರು.
ಎಲ್ಲಾ ವಿದ್ಯಾರ್ಥಿಗಳಿಗೂ ಶೀಘ್ರ ಉಚಿತ ಬಸ್ ಪಾಸ್: ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸದ್ಯ ಪ.ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ್ದು, ಕೋವಿಡ್ ಆರ್ಥಿಕ ಸಂಕಷ್ಟದಿAದ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಲು ಸಾಧ್ಯವಾಗಿದ್ದು. ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಂಡು ಶೀಘ್ರದಲ್ಲಿ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೂ ಉಚಿತ ಬಸ್ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದರು.
ಎಸ್.ಟಿ.ಗೆ 7.5 ಮೀಸಲಾತಿಗೆ ಬದ್ಧ: ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ನೀಡಬೇಕೆಂದು ಹೋರಾಟ ನಡೆಯುತ್ತಿದೆ. ಈ ನಿಟ್ಟಿನಲ್ಲಿ ನಾಗಮೋಹನ್ ದಾಸ್ ವರದಿ ಕೊಟ್ಟಿದ್ದಾರೆ. ಇದನ್ನು ಉನ್ನತ ಮಟ್ಟದ ಸಮಿತಿಯ ಮೂಲಕ ಅದರ ಪರಿಶೀಲನೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್ನಲ್ಲಿ ಶೇ. 50 ಮೀಸಲಾತಿ ಮೀರಬಾರದು ಎಂಬ ಆದೇಶದ ಹಿನ್ನೆಲೆಯಲ್ಲಿ ಎಲ್ಲಾ ರೀತಿಯಲ್ಲೂ ಪರಿಶೀಲನೆ ನಡೆಸಿ ಮೀಸಲಾತಿ ಜಾರಿಗೆ ತರಲಾಗುವುದು. ಎಂತಹ ಪರಿಸ್ಥಿತಿಯಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾಗಿ ನೀಡುವ ಕೆಲಸವನ್ನು ನಾನು ಮಾಡುತ್ತೇನೆ. ಆ ಮಾತಿಗೆ ನಾನು ಬದ್ಧನಾಗಿದ್ದೇನೆ ಎಂದರು.
ಕೊಟ್ಟ ಮಾತಿನಂತೆ ಮದಲೂರು ಕೆರೆಗೆ ನೀರು: ಶಿರಾ ಉಪಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊಟ್ಟ ಮಾತಿನಂತ ಮದಲೂರು ಕೆರೆಗೆ 60 ದಿನ ನೀರು ಹರಿಸಲಾಗಿದೆ. ಮದಲೂರು ಕೆರೆಗೆ ಶಾಶ್ವತವಾಗಿ ನೀರು ನಿಗಧಿ ಮಾಡುವ ವಿಚಾರವಾಗಿ ಅದ್ಯಯನ ನಡೆಯುತ್ತಿದೆ. ಇದಕ್ಕೆ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರು ಕ್ರಮ ಕೈಗೊಂಡಿದ್ದಾರೆ ಎಂದರು.
ಕೋಟೆ ಅಭಿವೃದ್ದಿಗೆ ಅನುದಾನ: ಶಿರಾ ರಾಜಾ ಕಸ್ತೂರಿ ರಂಗಪ್ಪನಾಯಕನ ಕೋಟೆ ಸಂರಕ್ಷಣೆ ಮಾಡುವ ಉದ್ದೇಶದಿಂದ ಕೋಟೆ ಅಭಿವೃದ್ದಿಗೆ ಅನುದಾನ ನೀಡುವ ಬಗ್ಗೆ ಯೋಜನಾ ವರದಿ ತಯಾರಿಸಿ ಅದಕ್ಕೆ ಬೇಕಾದ ಅನುದಾನ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದರು.
ಶಿರಾ ರಾಜ ಕಸ್ತೂರಿ ರಂಗಪ್ಪನಾಯಕನ ಕೋಟೆ ವೀಕ್ಷಣೆ ನಂತರ ಶಿರಾ ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯ ಕಟ್ಟಡವನ್ನು ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ, ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ, ರಾಜ್ಯ ರೇಷ್ಮೆ ಉದ್ಯಮಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ, ತೆಂಗು ಮತ್ತು ನಾರು ಅಬಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಮಂಜುನಾಥ್, ತಹಶೀಲ್ದಾರ್ ಮಮತ, ಶಿರಾ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಈರಣ್ಣ, ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ನಗರ ಅಧ್ಯಕ್ಷ ವಿಜಯರಾಜ್, ತಾಲ್ಲೂಕು ಅಧ್ಯಕ್ಷ ರಂಗಸ್ವಾಮಿ, ಮಾಲಿ ಸಿ.ಎಲ್.ಗೌಡ, ಮುದಿಮಡು ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು. ಶಿ