ಕುಣಿಗಲ್ : ತಾಲೂಕಿನ ನ್ಯಾಯಾಲಯದ ಪ್ರಧಾನ ಸಿವಿಲ್ ಗೌರವಾನ್ವಿತ ನ್ಯಾಯಾಧೀಶರಾದ ಅನಿತಾ ರವರು ಕಾರ್ಮಿಕ ಇಲಾಖೆಯಿಂದ ನೀಡುವ ಸರ್ಕಾರಿ ಸೌವಲತ್ತುಗಳ ಮಂಜೂರಾತಿ ಆದೇಶ ಪತ್ರಗಳನ್ನು
ವಿವಿಧ ಫಲಾನುಭವಿಗಳಿಗೆ ವಿತರಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಹಯೋಗದೊಂದಿಗೆ ಕರ‍್ಮಿಕ ಇಲಾಖೆ ಕಾರ್ಮಿಕ ಅದಾಲತ್ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಅದಾಲತನ್ನು ಉದ್ಘಾಟಿಸಿ ಮಾತನಾಡಿದ ನ್ಯಾಯಾಧೀಶರು ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಸಿಗುವ ಸವಲತ್ತುಗಳನ್ನು ಎಳೆ ಎಳೆಯಾಗಿ ಹೇಳಿದ ಅವರು ಕಾರ್ಮಿಕರು ಸರ್ಕಾರ ನೀಡುವ ಹಲವಾರು ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳ ಬೇಕೆಂದು ಸಲಹೆ ನೀಡಿದರು.
ಈ ಸಂದರ್ಬದಲ್ಲಿ ತಾಲೂಕು ಕಾರ್ಮಿಕ ನಿರೀಕ್ಷಕ ಪುಟ್ಟರಾಜು ಸರ್ಕಾರಿ ಸಹಾಯಕ ಅಭಿಯೋಜಕರಾದ ಕಲ್ಪನಾ, ಕೆ ಜಿ ಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಹುಚ್ಚೇಗೌಡ ಕಂಪ್ಯೂಟರ್ ಆಪರೇಟರ್ ವಿಜಯ ಒಳಗೊಂಡಂತೆ ಮತ್ತಿತರರು ಉಪಸ್ಥಿತರಿದ್ದರು.