ಗ್ರಾಮೀಣ ವಸತಿ ಯೋಜನೆ ಅನುಷ್ಠಾನಗೊಳಿಸಿ : ಸಂಸದ ಜಿ.ಎಸ್.ಬಸವರಾಜು
ತುಮಕೂರು: ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವುದರೊಂದಿಗೆ “ಗ್ರಾಮೀಣ ವಸತಿ” ಹಾಗೂ “ಸಂಸದರ ಆದರ್ಶ ಗ್ರಾಮ” ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನ ಗೊಳಿಸುವಂತೆ ಸಂಸದ ಜಿ.ಎಸ್.ಬಸವರಾಜು ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಗ್ರಾಮೀಣ ವಸತಿ ಹಾಗೂ ಸಂಸದರ ಆದರ್ಶ ಗ್ರಾಮ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಿಗಧಿತ ಗುರಿ ಸಾಧಿಸದೇ ಅಧಿಕಾರಿಗಳು ಸಭೆಗೆ ತಪ್ಪು ಮಾಹಿತಿ ನೀಡಬಾರದು. ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಯೋಜನೆಯನ್ನು ನೂರರಷ್ಟು ಯಶಸ್ವಿಗೊಳಿಸಬೇಕು ಎಂದು ನಿರ್ದೇಶಿಸಿದರು.
ಗ್ರಾಮೀಣ ವಸತಿ ಯೋಜನೆಯಡಿ ಈಗಾಗಲೇ ಗುರುತಿಸಿರುವ ಅರ್ಹ ಫಲಾನುಭವಿಗಳಿಗೆ ನಿಗಧಿತ ಕಾಲಮಿತಿಯೊಳಗೆ ನಿವೇಶನದ ಹಕ್ಕುಪತ್ರ ವಿತರಣೆ ಮಾಡಬೇಕು. ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಜಾಗ ಗುರುತಿಸಿ ವಸತಿ ನಿರ್ಮಾಣ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ನಿಗಧಿಗೊಳಿಸಿರುವ ನಿವೇಶನ ಕಲ್ಪಿಸುವ ಸೌ ಲಭ್ಯದ ಗುರಿಯನ್ನು ಕಾಲಮಿತಿಯೊಳಗೆ ಪೂರ್ಣ ಗೊಳಿಸಬೇಕು. ಜೊತೆಗೆ ಸಂಸದರ ಆದರ್ಶ ಗ್ರಾಮ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಬೇಕು ಎಂದು ನಿರ್ದೇಶಿಸಿದರು.
ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್ ಮಾತನಾಡಿ, ಬಹುತೇಕ ಎಲ್ಲಾ ಇಲಾಖೆಗಳು ವಸತಿ ಯೋಜನೆಯಡಿ ನಿವೇಶನ ಕಲ್ಪಿಸುವ ಯೋಜನೆಯನ್ನು ಸಾಕಾರಗೊಳಿಸುವಲ್ಲಿ ಆಸಕ್ತಿ ವಹಿಸಿಲ್ಲ ಎಂದರಲ್ಲದೆ, 2016ರಿಂದಲೂ ಆ ಯ್ಕೆಯಾದ ಫಲಾನುಭವಿಗಳಿಗೆ ನಿವೇಶನ ಸೌ ಲಭ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ನಿರಾಸಕ್ತಿ ವಹಿಸಿ ದ್ದಾರೆ ಎಂದು ಬೇಸರ ವ್ಯಕ್ತಪಡಿಸಿ, ವಸತಿ ಯೋ ಜನೆಯಡಿ ಗುರುತಿಸಲ್ಪಟ್ಟ ಫಲಾನುಭವಿಗಳಿಗೆ ನಿವೇಶನ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು. ಅಸಮರ್ಪಕ ಮಾಹಿತಿ ನೀಡ ಬಾರದು. ಇದರಿಂದ ಯೋಜನೆಯ ಅನುಷ್ಠಾನ ಯಶಸ್ವಿಯಾಗುವುದಿಲ್ಲ ಎಂದರು.
ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ನಿವೇಶನ ಕಲ್ಪಿಸಬೇಕು. ಆಯಾ ವರ್ಷದ ಗುರಿಯನ್ನು ಅದೇ ವರ್ಷವೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ: ಕೆ.ವಿದ್ಯಾಕುಮಾರಿ ಮಾತನಾಡಿ, ವಸತಿ ಯೋಜನೆಯನ್ನು ಇಲಾಖೆಗಳು ಸಮ ರ್ಪಕವಾಗಿ ಅನುಷ್ಟಾನಗೊಳಿಸುವ ಮೂಲಕ ನಿಗಧಿತ ಗುರಿಯನ್ನು ಸಾಧಿಸಬೇಕು. ನೈಜ ಫಲಾನುಭವಿಗಳಿಗೆ ಈ ಯೋಜನೆಯ ಸೌಲಭ್ಯ ಸಿಗಬೇಕು. ಅನರ್ಹರಿಗೆ ಈ ಯೋಜನೆ ಸೌಲಭ್ಯ ದೊರೆಯದಂತೆ ಎಚ್ಚರ ವಹಿಸಬೇಕು. ಸಂಸದರು ಸಭೆಯಲ್ಲಿ ನೀಡಿರುವ ಸೂಚನೆಗಳನ್ನು ಪಾಲಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ದಿಶಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿ ದಂತೆ ಇತರರು ಉಪಸ್ಥಿತರಿದ್ದರು.