ಕುಣಿಗಲ್
ಚಿಂದಿ ಆಯುವ ಮಕ್ಕಳನ್ನು ರಕ್ಷಿಸುವವರು ಯಾರು…?
ಕುಣಿಗಲ್ : ಚಿಂದಿ ಆಯುವ ಹಾಗೂ ಭಿಕ್ಷೆ ಬೇಡುವ ಮಕ್ಕಳು ಹೆಚ್ಚಾಗಿರುವುದು ಕಂಡುಬಂದಿದೆ ವಿಚಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಗೊತ್ತಿದ್ದರೂ ಯಾವ ಕ್ರಮವನ್ನೂ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಅಲ್ಲಲ್ಲಿ ಮಾತನಾಡುತ್ತಿರುವುದು ಕೇಳಿಬರುತ್ತಿದೆ.
ಪಟ್ಟಣದಲ್ಲಿ ಬೆಳಿಗ್ಗೆ 6ಗಂಟೆಯಿಂದ 8ಗಂಟೆಯ ವೇಳೆ ಸಮಯದಲ್ಲಿ ಚಿಂದಿ ಆಯುವ ಮಕ್ಕಳು ಬೀದಿ ಬೀದಿಯಲ್ಲಿ ಅಲೆಯುತ್ತಿರುವುದು ಹಾಗೂ ಸಣ್ಣಪುಟ್ಟ ಚಿಂದಿ ಆಯುವ ತ್ತಿರುವುದು ಭಿಕ್ಷೆ ಬೇಡುತ್ತಿರುವುದು ಕಂಡುಬರುತ್ತಿದೆ ಇದರಿಂದ ಈ ಮಕ್ಕಳು ಮುಂದಿನ ದಿನಗಳಲ್ಲಿ ಸಮಾಜಕ್ಕೆ ಕಂಟಕ ರಾಗಿ ಬೆಳೆಯಬಹುದು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ ಹಾಗೂ ಚಿಂದಿ ಆಯುವ ಹಾಗೂ ಭಿಕ್ಷೆ ಬೇಡುವ’ ದಿಕ್ಕು ದೆಸೆಯಿಲ್ಲದೆ ಬೀದಿ ಬೀದಿಗಳಲ್ಲಿ ಸುಖಾಸುಮ್ಮನೆ ಓಡಾಡುವ ಮಕ್ಕಳಿಂದ ಕೆಲವು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿರುವುದು ಉಂಟು. ಮಾಹಿತಿ ಪ್ರಕಾರ ಇವರುಗಳು ಪಟ್ಟಣದಲ್ಲಿ ಖಾಲಿ ಇರುವ ಜಾಗಗಳಲ್ಲಿ ವಾಸ ಮಾಡುತ್ತಾರೆ ಎಂದು ಹೆಸರು ಹೇಳಲು ಇಚ್ಛಿಸದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಇಂತಹ ಮಕ್ಕಳನ್ನು ರಕ್ಷಿಸಲೆಂದು ಸರ್ಕಾರ ಅಧಿಕಾರಿಗಳನ್ನು ನೇಮಕ ಮಾಡಿದ್ದರು ಸಂಬಂಧಪಟ್ಟ ಅಧಿಕಾರಿಗಳು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು ಇನ್ನು ಮುಂದಾದರೂ ಅಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ ?