ಮಧುಗಿರಿ : ಮುಂದಿನ ಜಿಪಂ ಹಾಗೂ ತಾಪಂ ಚುನಾವಣೆಗಳಲ್ಲಿ ಅತಿ ಹೆಚ್ಚು ಸ್ಥಾನ ಪಡೆಯುವುದರ ಜೊತೆಗೆ ತುಮಕೂರು ಜಿಲ್ಲಾ ಪಂಚಾಯಿತಿಯನ್ನು ಬಿಜೆಪಿ ಜಿಲ್ಲಾ ಪಂಚಾಯಿತಿಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಕರು ಹಾಗೂ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ತಯಾರಿಸಿದ್ದು, ಈ ಯೋಜನೆಗಳು ಜನರ ಮನೆಬಾಗಿಲಿಗೆ ತಲುಪುವಂತೆ ಮಾಡಲು ಕಾರ್ಯಕರ್ತರು ಮುಂದಾಗಬೇಕು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಆಡಳಿತದ ಕಾಲದಲ್ಲಿ ಕೈಗೊಂಡ ಯೋಜನೆಗಳನ್ನು ಸಹ ಮತದಾರರ ಮನದಲ್ಲಿ ಮುಟ್ಟುವಂತಾಗಬೇಕು ಎಂದ ಅವರು, ರಾಜ್ಯದ ಅಭಿವೃದ್ಧಿ ಮತ್ತು ಪಕ್ಷದ ಬೆಳವಣಿಗೆ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ನನ್ನಂತ ಸಾಮಾನ್ಯ ಕಾರ್ಯಕರ್ತನನ್ನೂ ಸಹ ಮಂತ್ರಿ ಮಾಡಲು ಬಿಜೆಪಿ ಪಕ್ಷದಿಂದ ಮಾತ್ರ ಸಾದ್ಯ ಎಂದ ಅವರು, ಕರೋನಾ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ದೇಶದಲ್ಲಿ ಮುಂಜಾಗ್ರತ ಕ್ರಮ ಕೈಗೊಂಡ ಫಲ ಭಾರತದ ಶೇಕಡ ತೊಂಬತ್ತು ರಷ್ಟು ಜನ ಕರೋನಾ ಲಸಿಕೆಯ ಪ್ರಥಮ ಡೋಸ್ ಪಡೆದು ಸುರಕ್ಷಿತವಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಪಿ.ಎಲ್.ನರಸಿಂಹಮೂರ್ತಿ, ಜಿಲ್ಲಾ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಸ್ವಾಮಿ, ನವೀನ್ ಸೀತಾರಾಮ್ ನಾಯ್ಕ, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ನಾಗರಾಜಪ್ಪ, ಜಿಲ್ಲಾ ಎಸ್ಸಿ ಮೋರ್ಚಾದ ಪ್ರಧಾನಕಾರ್ಯದರ್ಶಿ ಎಸ್.ಆರ್.ರಮೇಶ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮು, ನಾಗೇಂದ್ರಪ್ಪ, ಉಪಾಧ್ಯಕ್ಷ ಲಕ್ಷ್ಮೀಪ್ರಕಾಶ್, ಮಂಡಲ ಕಾರ್ಯಾಲಯ ಕಾರ್ಯದರ್ಶಿ ಲಕ್ಷ್ಮೀಪತಿ, ಕಾರ್ಯದರ್ಶಿ ಕಲ್ಪನಾ ಗೋವಿಂದಾರಾಜು, ಮಹಿಳಾ ಮೋರ್ಚಾ ಅಧ್ಯಕ್ಷೆ ರತ್ನ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿಗಳಾದ ರತ್ನಮ್ಮ, ಪುಟ್ಟತಾಯಮ್ಮ, ಉಪಾಧ್ಯಕ್ಷೆ ಲತಾ ಪ್ರದೀಪ್, ಯುವಮೋರ್ಚಾ ಅಧ್ಯಕ್ಷ ಕಾರ್ತಿಕ್ ಆರಾಧ್ಯ, ಪ್ರಧಾನ ಕಾರ್ಯದರ್ಶಿಗಳಾದ ತೇಜಸ್ ಗೌಡ, ಗುರುಪ್ರಸಾದ್, ರೈತ ಮೋರ್ಚಾ ಅಧ್ಯಕ್ಷ ಸುರೇಶ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಜಿ.ಕೆ.ಹನುಮತರಾಯಪ್ಪ, ಎಸ್ಟಿ ಮೋರ್ಚಾ ಅಧ್ಯಕ್ಷ ಪ್ರಕಾಶ್, ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಲಿಂಗಪ್ಪ, ಬಗರ್ ಹುಕುಂ ಕಮಿಟಿ ನಾಮ ನಿರ್ದೇಶಕರಾದ ಪ್ರಸನ್ನಕುಮಾರ್, ನಾರಾಯಣಪ್ಪ, ಅರೆ ಅಲೆಮಾರಿ ಜನಾಂಗದ ಅಧ್ಯಕ್ಷ ಮಂಜುನಾಥ್ ಹೋಬಳಿ ಮಹಾಶಕ್ತಿ ಕೇಂದ್ರದ ಪ್ರಮುಖರುಗಳಾದ ರಂಗನಾಥ್, ವೆಂಕಟೇಶ್, ಗಂಗಾಧರ್, ಶಿವಶಂಕರ್, ನಗರ ಅಧ್ಯಕ್ಷ ಟೈಲರ್ ನಾಗರಾಜು, ಶಾಂತಾರಾಧ್ಯ ಹಾಗೂ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.