ತುಮಕೂರು : ಜೆಡಿಎಸ್ ಕಚೇರಿಯಲ್ಲಿ ಗಾಂಧೀ ಜಯಂತಿ ಆಚರಣೆ
ತುಮಕೂರು: ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಹಾತ್ಮಗಾಂಧೀಜಿಯವರ 152ನೇ ಜಯಂತಿಯನ್ನು ಜಿಲ್ಲಾಧ್ಯಕ್ಷರಾದ ಆರ್.ಸಿ.ಆಂಜಿನಪ್ಪ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿತು.
ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ ಅವರು, ಗಾಂಧೀಜಿಯವರು ಅಹಿಂಸೆಯ ಮೂಲಕವೇ ಹೋರಾಟದ ನೇತೃತ್ವ ವಹಿಸಿ ದೇಶಕ್ಕೆ ಸ್ವಾತಂತ್ರ್ಯಾ ತಂದುಕೊಟ್ಟರು. ಅವರ ಬದುಕು ಮತ್ತು ಹೋರಾಟ ನಮ್ಮೆಲ್ಲರಿಗೂ ಮಾದರಿ ಎಂದರು.
ಗಾಂಧೀಜಿಯವರು ಭಾರತಕ್ಕೆ ಸ್ವಾತಂತ್ರ್ಯಾ ದೊರಕಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟು ಶ್ರಮಿಸಿದರು. ಅಹಿಂಸೆಯ ಅಸ್ತ್ರ ಹಿಡಿದು ರಾಷ್ಟ್ರವನ್ನು ಸ್ವಾತಂತ್ರ್ಯಾ ಹೋರಾಟದಲ್ಲಿ ಭಾಗವಹಿಸಲು ಪ್ರೇರೇಪಿಸಿ ಯಶಸ್ವಿಯಾದ ಬಳಿಕವೂ ತಮ್ಮ ಸರಳ ಬದುಕನ್ನು ಮುಂದುವರೆಸಿದ ಮಹಾನ್ ಚೇತನ ಇಂದಿಗೂ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಗಾಂಧೀಜಿ ತಮ್ಮ ಜೀವನದಲ್ಲಿ ಹಲವಾರು ವಿಷಯ ಮತ್ತು ವ್ಯಕ್ತಿಗಳಿಂದ ಪ್ರಭಾವಿತರಾಗಿದ್ದರು. ರಾಷ್ಟಪಿತ ಮಹಾತ್ಮ ಗಾಂಧಿ ದೇಶ ವಾಸಿಗಳ ಆಸ್ತಿ. ಅವರ ಆದರ್ಶ ಬದುಕು ಯುವ ಸಮೂಹ ಮೈಗೂಡಿಸಿಕೊಳ್ಳಬೇಕು. ಆ ಮೂಲಕ ಅಹಿಂಸಾ ಮಾರ್ಗದಲ್ಲಿ ನಡೆಯಬೇಕು ಎಂದು ಸಲಹೆ ನೀಡಿದರು.
ಗಾಂಧೀಜಿಯವರು ಕೇವಲ ಭಾರತದೇಶಕ್ಕೆ ಅಷ್ಟೇ ಅಲ್ಲ, ಇಡೀ ಪ್ರಪಂಚಕ್ಕೆ ಗಾಂಧಿಜಿಯವರ ಆದರ್ಶಗಳು ಮಾದರಿಯಾಗಿವೆ. ಗಾಂಧೀಜಿಯವರು ತಂದುಕೊಟ್ಟ ಸ್ವಾತಂತ್ರ್ಯಾದಲ್ಲಿ ಇಂದು ನಾವೆಲ್ಲರೂ ಸಹ ಸಹೋದರತೆಯಿಂದ ಬಾಳುತ್ತಿದ್ದೇವೆ. ಯಶಸ್ವಿಯಾಗಿ ಪ್ರಜಾಪ್ರಭುತ್ವನ್ನು ನಡೆಸುತ್ತಿರುವುದಕ್ಕೆ ಗಾಂಧಿಜಿಯವರು ತಂದುಕೊಟ್ಟ ಸ್ವಾತಂತ್ರ್ಯಾವೇ ಕಾರಣ ಎಂದು ತಿಳಿಸಿದರು.
ಹಾಗೆಯೇ ಲಾಲ್ ಬಹದ್ದೂರ್ ಶಾಸ್ತ್ರೀಯವರ 117ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ಆದರ್ಶಗಳನ್ನು ನಾವೆಲ್ಲಾ ಅನುಸರಿಸಬೇಕು ಎಂದು ಸಲಹೆ ನೀಡಿದರು.
ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್. ನಾಗರಾಜ್ ಮಾತನಾಡಿ, ಗಾಂಧೀಜಿಯವರು ದೇಶಕಂಡ ಮಹಾನ್ ನಾಯಕರಾಗಿದ್ದಾರೆ. ಅವರ ಆದರ್ಶಗುಣಗಳನ್ನು ಇಂದಿನ ಯುವಜನತೆ ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ಜೆಡಿಎಸ್ ನಗರಾಧ್ಯಕ್ಷ ಬೆಳ್ಳಿ ಲೋಕೇಶ್ ಮಾತನಾಡಿ, ರಾಷ್ಟ್ರಪಿತ ಮಹಾತ್ಮಗಾಂಧಿಜಿಯವರು ಬ್ರಿಟೀಷರ ವಿರುದ್ಧ ಶಾಂತಿಯಿಂದ ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯಾ ತಂದುಕೊಟ್ಟರು, ಇಂದು ನಾವು ಸ್ವಾತಂತ್ರ್ಯಾ ಭಾರತದಲ್ಲಿ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ಮಹಾತ್ಮಗಾಂಧಿಜಿಯವರು ತಂದುಕೊಟ್ಟ ಸ್ವಾತಂತ್ರ್ಯಾವೇ ಕಾರಣ ಎಂದರು.
ಮಹಾತ್ಮಗಾಂಧೀಜಿಯವರ ರಾಮರಾಜ್ಯದ ಪರಿಕಲ್ಪನೆಯನ್ನು ಕಾಣಬೇಕಾದರೆ ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ರಾಮರಾಜ್ಯದ ಪರಿಕಲ್ಪನೆ ಸಾಕಾರಗೊಳಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷರಾದ ಟಿ.ಆರ್.ನಾಗರಾಜು, ಹಾಲನೂರು ಅನಂತಕುಮಾರ್, ರಾಜ್ಯ ಹಿರಿಯ ಉಪಾಧ್ಯಕ್ಷ ಗಂಗಣ್ಣ, ನಗರಾಧ್ಯಕ್ಷ ಬೆಳ್ಳಿ ಲೋಕೇಶ್, ಜಿಲ್ಲಾ ಹಿರಿಯ ಉಪಾಧ್ಯಕ್ಷ ದೇವರಾಜು, ಪಾಲಿಕೆ ಸದಸ್ಯರಾದ ಮಂಜುನಾಥ್, ಎ.ಶ್ರೀನಿವಾಸ್, ಪ್ರಚಾರ ಸಮಿತಿ ಅಧ್ಯಕ್ಷ ಚಲುವರಾಜು, ಮುಖಂಡರಾದ ಹಿರೇಹಳ್ಳಿ ಮಹೇಶ್, ಗಣೇಶ್, ಲೀಲಾವತಿ, ಜಯಶ್ರೀ, ಲಕ್ಷ್ಮಮ್ಮ, ಯಶೋಧ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.