ತಿಪಟೂರು
ತಿಪಟೂರು ದಸರಿಘಟ್ಟದ ಶ್ರೀ ಚೌಡೇಶ್ವರಿ ಅಮ್ಮನವರ ಮುಳ್ಳು ಗದ್ದಿಗೆ ಉತ್ಸವದಲ್ಲಿ ಭಾಗಿಯಾದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ತಿಪಟೂರು : ತಾಲೂಕಿನ ಆದಿಚುಂಚನಗಿರಿ ಶಾಖಾಮಠ ಶ್ರೀ ಕ್ಷೇತ್ರ ದಸರಿಘಟ್ಟ ದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಮುಳ್ಳು ಗದ್ದಿಗೆ ಉತ್ಸವ ಭಕ್ತರ ಸಮ್ಮುಖದಲ್ಲಿ ಇಂದು ಮಧ್ಯಾಹ್ನ ವಿಜೃಂಭಣೆಯಿಂದ ಜರುಗಿತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಡಾ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದರು.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶ್ರೀ ಚೌಡೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿ ಅಮ್ಮನವರ ಮುಳ್ಳು ಗದ್ದಿಗೆ ಉತ್ಸವದಲ್ಲಿ ಭಾಗಿಯಾದರು. ದಸರಿಘಟ್ಟ ಮಠದ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ. ಹಾಗೂ ವಿವಿಧ ಶಾಖ ಮಠದ ಶ್ರೀಗಳು. ಸೇರಿದಂತೆ ಶ್ರೀ ಚೌಡೇಶ್ವರಿ ದೇವಾಲಯ ಟ್ರಸ್ಟಿಗಳು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಚೌಡೇಶ್ವರಿ ಅಮ್ಮನವರ ಭಕ್ತಾದಿಗಳು ಮುಳ್ಳು ಗದ್ದಿಗೆ ಉತ್ಸವದಲ್ಲಿ ಭಾಗವಹಿಸಿದ್ದರು