ಹಸಿ-ಒಣ ತ್ಯಾಜ್ಯ ವೈಜ್ಞಾನಿಕ ವಿಲೇವಾರಿ ನಿರ್ವಹಣೆ ಜಾಗೃತಿ ಜಾಥಾ
ತುಮಕೂರು : ಜಿಲ್ಲಾಡಳಿತ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ, ತುಮಕೂರು ಗ್ರಾಮ ಪಂಚಾಯತ್ ಕಾರ್ಯಾಲಯ ಹಾಗೂ ಬೆಳ್ಳಾವಿ ರೋಟರಿ ಬಿಲ್ವಪ್ರಿಯೆ ಸರ್ಕಾರಿ ಪ್ರೌಢಶಾಲೆ ಸಹಯೋಗದೊಂದಿಗೆ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ತುಮಕೂರು ತಾಲೂಕಿನ ಬೆಳ್ಳಾವಿ ಗ್ರಾಮದಲ್ಲಿ ಹಸಿ, ಒಣ ತ್ಯಾಜ್ಯಗಳ ವೈಜ್ಞಾನಿಕ ವಿಲೇವಾರಿ ನಿರ್ವಹಣೆ ಕುರಿತು ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲಾಯಿತು.
ಜಾಗೃತಿ ಜಾಥಾ ಬೆಳ್ಳಾವಿಯ ಪದವಿ ಪೂರ್ವ ಕಾಲೇಜು ಆವರಣದಿಂದ ತ್ಯಾಜ್ಯ ವಿಲೇವಾರಿ ಕುರಿತ ಜಾಗೃತಿ ಘೋಷ ವಾಕ್ಯದೊಂದಿಗೆ ಆರಂಭವಾಗಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಜಾಥಾದಲ್ಲಿ ಬೆಳ್ಳಾವಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ರೋಟರಿ ಬಿಲ್ವಪ್ರಿಯ ಪದಾಧಿಕಾರಿಗಳು, ಶಾಲಾ ಶಿಕ್ಷಕ ವರ್ಗ ಮತ್ತು ಸಿಬ್ಬಂದಿ, ಗ್ರಾಮ ಪಂಚಾಯತ್ ಸಿಬ್ಬಂದಿ, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಸ್ವ-ಸಹಾಯ ಸಂಘದ ಪ್ರತಿನಿಧಿಗಳು, ಪೌರ ಕಾರ್ಮಿಕರು ಹಾಗೂ ಶಾಲೆ ಮಕ್ಕಳು ಭಾಗವಹಿಸಿದ್ದರು.
ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾ ಬೆಳ್ಳಾವಿ ಮುಖ್ಯ ವೃತ್ತದಲ್ಲಿ ಸಮಾವೇಶಗೊಂಡಿತು. ಈ ವೇಳೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಹಸಿ, ಒಣ ತ್ಯಾಜ್ಯಗಳ ವೈಜ್ಞಾನಿಕ ವಿಲೇವಾರಿ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸುತ್ತಾ, ತಮ್ಮ ಮನೆ/ವಾಣಿಜ್ಯ, ಸಂಸ್ಥೆ/ಅAಗಡಿ/ಕಚೇರಿ/ ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ತಮ್ಮಲ್ಲಿಯೆ ಹಸಿ/ಒಣ ಕಸವನ್ನಾಗಿ ವಿಂಗಡಿಸಿ ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಕೌಶಾಲ್ಯಾಭಿವೃದ್ಧಿ ಸಹಾಯಕ ನಿರ್ದೇಶಕ ವಿಶ್ವೇಶ್ವರಯ್ಯ ಮಾತನಾಡಿ, ಮಕ್ಕಳಲ್ಲಿ ಸ್ವಚ್ಚತೆಯ ಬಗ್ಗೆ ಅರಿವು, ಪರಿಸರವನ್ನು ಕಾಪಾಡಿಕೊಳ್ಳುವ ಪ್ರಜ್ಞೆ ಮೂಡಿದಲ್ಲಿ ಭವಿಷ್ಯದಲ್ಲಿ ಉತ್ತಮ ಸ್ವಚ್ಚತಾ ವಾತಾವರಣವುಳ್ಳ ಜಗತ್ತನ್ನು ನಿರ್ಮಿಸಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಳ್ಳಾವಿ ಗ್ರಾಮಸ್ಥರು, ಪಂಚಾಯತಿ ಸದಸ್ಯರು, ಸಿಬ್ಬಂದಿ ಹಾಗೂ ಅಧ್ಯಕ್ಷರು ಮತ್ತು ಸದಸ್ಯರು, ರೋಟರಿ ಬಿಲ್ವಪ್ರಿಯ, ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಸ್ವಸಹಾಯ ಸಂಘದ ಸದಸ್ಯರು ಮತ್ತು ಪೌರ ಕಾರ್ಮಿಕರು ಭಾಗವಹಿಸಿದ್ದರು.