ತಿಪಟೂರು
ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ
ತಿಪಟೂರು : ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿ ಆಗಿದ್ದನ್ನು ವೀಕ್ಷಣೆಗೆ ತೆರಳಿದ ಗ್ರಾ.ಪಂ.ಸದಸ್ಯನ ಮೇಲೆ ಸ್ಥಳೀಯ ಗ್ರಾಮಸ್ಥರ ಕುಟುಂಬ ಸಮೇತವಾಗಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಾಲ್ಲೂಕಿನ ರಂಗಾಪುರ ಗ್ರಾಮ ಪಂಚಾಯಿತಿಯ ಹೊಸಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ್. ಎಚ್.ಎಸ್. ಎಂಬುವರು ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿ ಆಗಿದ್ದ ಸ್ಥಳ ವೀಕ್ಷಣೆಗೆ ತೆರಳಿದ ಸಂದರ್ಭದಲ್ಲಿ ಅದೇ ಗ್ರಾಮದ ಗಂಗಾಧರ ಮತ್ತು ಮಕ್ಕಳು ಸೇರಿ ವಿನಾಕಾರಣ ಜಗಳ ತೆಗೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಸದ್ಯ ಸದ್ಯರನ್ನು ಸ್ಥಳೀಯ ಗ್ರಾಮಸ್ಥರು ಬಿಡಿಸಿ ನಗರದ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.