ಕಾಂಗ್ರೆಸ್ ನೊಂದಿಗೆ ಬಿಜೆಪಿ ಒಳ ಒಪ್ಪಂದ : ಶಾಸಕ ಡಿ.ಸಿ.ಗೌರಿಶಂಕರ್
ಮಧುಗಿರಿ : ಕಾಂಗ್ರೆಸ್ ನವರು ಒಗ್ಗಟ್ಟು ಪ್ರದರ್ಶನ ಮಾಡುತ್ತಿರುವುದು ಕೇವಲ ತಾತ್ಕಾಲಿಕ ಅಷ್ಟೇ. ಒಳಗಡೆ ಬೇರೆಯೇ ರಾಜಕೀಯ ಮಾಡುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.
ತಾಲೂಕಿನ ದೊಡ್ಡೇರಿ ಹೋಬಳಿಯ ಕೈಮರ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ವಿಧಾನಸಭಾ ಕ್ಷೇತ್ರದ ಕಸಬಾ ಹಾಗೂ ದೊಡ್ಡೇರಿ ಹೋಬಳಿ ಚುನಾಯಿತ ಪ್ರತಿನಿಧಿಗಳ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಅವರು ಇಷ್ಟು ದಿನ ದೇವೇಗೌಡರನ್ನು ನಾವೇ ಸೋಲಿಸಿದ್ದು ಎಂದು ಬೀಗುತ್ತಿದ್ದ ಕಾಂಗ್ರೇಸ್ ನವರು ಈಗ ಸೋಲಿನ ಭೀತಿಯಿಂದ ದೇವೇಗೌಡರನ್ನು ನಾನು ನಾವು ಸೋಲಿಸಿಲ್ಲ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದರು. ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಜೆಡಿಎಸ್ ಪಕ್ಷ ನೇರ ಸ್ಪರ್ಧೆ ನೀಡಲಿದ್ದು. ದೇವೇಗೌಡರ ಸೋಲನ್ನು ಮನದಲ್ಲಿಟ್ಟುಕೊಂಡು ಮತದಾರರು ಮತ ಚಲಾಯಿಸಬೇಕು ಎಂದು ಕರೆ ನೀಡಿದರು.
ಬಿಜೆಪಿಯವರು ಡಮ್ಮಿ ಅಭ್ಯರ್ಥಿಯನ್ನು ಹಾಕಿ ಕಾಂಗ್ರೆಸ್ ನೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಅವರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದ ಅವರು ಮಧುಗಿರಿ ಕ್ಷೇತ್ರದಲ್ಲಿ 350ಕ್ಕೂ ಹೆಚ್ಚು ಮತಗಳು ಜೆಡಿಎಸ್ ಪಕ್ಷಕ್ಕೆ ಬರಲು ಕಾರ್ಯಕರ್ತರು ಶ್ರಮವಹಿಸಬೇಕು ಎಂದರು.
ಮಧುಗಿರಿ ಶಾಸಕ ಎಂ.ವಿ.ವೀರಭದ್ರಯ್ಯ ಮಾತಾನಾಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅನೇಕ ಜನಪರ ಯೋಜನೆಗಳನ್ನು ನೀಡಿದ್ದಾರೆ. 25 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದಾರೆ. ಲಾಟರಿ ನಿಷೇಧ, ಸಾರಾಯಿ ನಿಷೇಧದಂತಹ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ಕುಮಾರಸ್ವಾಮಿಯವರಿಗಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಜೊತೆ ಸೇರಿ ನಾವು ಕೆಟ್ಟವು. ಅವರ ಜೊತೆ ಮೈತ್ರಿ ಮಾಡಿಕೊಳ್ಳದೆ ನಾವೇ ನೇರ ಸ್ಪರ್ಧೆ ಮಾಡಿದ್ದರೆ ಒಂದೂವರೆ ಲಕ್ಷಕ್ಕೂ ಅಧಿಕ ಮತದಿಂದ ನಾವು ಗೆಲ್ಲುತ್ತಿದ್ದೆವು ಎಂದರು. ಇಲ್ಲಿನ ಮಾಜಿ ಶಾಸಕರು ಬೆಳ್ಳಾವಿ ಕ್ಷೇತ್ರದಲ್ಲಿ ಆಯ್ಕೆಯಾಗಲು ದೇವೇಗೌಡರು ಕಾರಣ ಎಂದ ಅವರು ಮಾಜಿ ಶಾಸಕ ಕೆ.ಎನ್.ರಾಜಣ್ಣ ಉಪಕಾರ ಸ್ಮರಣೆ ಮಾಡಲ್ಲಿಲ್ಲ ಎಂದರು.
ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಕ್ಷೇತ್ರಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ತರುವುದು ಹಾಗೂ ಮಧುಗಿರಿಯನ್ನು ಜಿಲ್ಲೆಯನ್ನಾಗಿ ಮಾಡುತ್ತೇವೆ ಎಂದರು.
ವಿಧಾನಪರಿಷತ್ ಅಭ್ಯರ್ಥಿ ಅನಿಲ್ ಕುಮಾರ್ ಮಾತನಾಡಿ, ನಾನು ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಜನಸೇವೆ ಮಾಡಲು ಉತ್ತಮ ಅನುಭವ ಪಡೆದಿದ್ದು, ಅನುಭವದಿಂದ ಮುಂದೆ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಯೋಜನೆಗಳನ್ನು ಮಾಡುತ್ತೇನೆ. ಮಧುಗಿರಿಯಲ್ಲಿ ಕೈಗಾರಿಕಾ ವಲಯ ಸ್ಥಾಪಿಸಲು ಕ್ರಮ ಕೈಗೊಳ್ಳುತ್ತೇನೆ ಎಂದ ಅವರು ಗ್ರಾಮಪಂಚಾಯಿತಿಗಳಿಗೆ ಬರುವ ಅನುದಾನಗಳನ್ನು ಸರಿಯಾದ ಸಮಯಕ್ಕೆ ಬರುವಂತೆ ಮಾಡುತ್ತೇನೆ ಆದ್ದರಿಂದ ಎಲ್ಲರೂ ನನಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದರು.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಪಕ್ಷದ ವೀಕ್ಷಕ ಮಂಜುನಾಥ್ ಮಾತನಾಡಿ, ಬಿಜೆಪಿ ಪಕ್ಷದವರು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದು, ಅನುದಾನ ನೀಡುವಲ್ಲಿ ಮಲತಾಯಿ ಧೋರಣೆ ನಡೆಸುತ್ತಿದೆ. ಇಲ್ಲಿನ ಬಿಜೆಪಿ ಅಭ್ಯರ್ಥಿ ಬಿಬಿಎಂಪಿಗೆ ಸ್ಪರ್ಧಿಸಿದ್ದಾಗ ಕೂಪನ್ ಗಳನ್ನು ನೀಡಿ ಗೆದ್ದಿದ್ದಾರೆ ಎಂದರು. ಕಾಂಗ್ರೆಸ್ ಒಡೆದ ಮನೆಯಾಗಿದ್ದು. ಅವರು ಈ ಜನ್ಮದಲ್ಲಿ ಸರಿಹೋಗುವುದಿಲ್ಲ ಎಂದರು. ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಇಲ್ಲಿ ಯಾವುದೇ ಕಾಮಗಾರಿಗಳು ಮಾಡಲು ಬಿಡುವುದಿಲ್ಲ ಎಂದರು.
ಪುರಸಭಾ ಸದಸ್ಯರಾದ ಎಂ.ಆರ್.ಜಗನ್ನಾಥ್, ಎಂ.ಎಲ್.ಗAಗರಾಜು, ಕೆ.ನಾರಾಯಣ್, ಎಂ.ಎಸ್.ಚಂದ್ರಶೇಖರ್ ಬಾಬು, ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್, ಜೆಡಿಎಸ್ ತಾಲೂಕು ಯುವ ಘಟಕದ ಅಧ್ಯಕ್ಷ ಕೇಬಲ್ ಸುಬ್ಬು, ಮುಖಂಡರುಗಳಾದ ತುಂಗೋಟಿ ರಾಮಣ್ಣ, ಬೆಳ್ಳಿ ಲೋಕೇಶ್, ಬಸವರಾಜು, ಗುಂಡಗಲ್ ಶಿವಣ್ಣ, ಬಸವರಾಜು, ಸಿಡದರಗಲ್ಲು ಶ್ರೀನಿವಾಸ್, ಸಿದ್ದಣ್ಣ, ಚೌಡಪ್ಪ, ನಾಗಭೂಷಣ್, ರವಿ, ಭಾರತಿ ಗೋವಿಂದರಾಜು, ಮಂಜುಳಾ, ಶ್ರೀನಿವಾಸ್, ತಿಮ್ಮಣ್ಣ, ಗೋವಿಂದರೆಡ್ಡಿ, ಕಂಭತ್ತನಹಳ್ಳಿ ರಘು, ರವಿ ಬಜ್ಜ, ಶೈಲಿ ರವಿ ಹಾಗೂ ಮುಂತಾದವರು ಇದ್ದರು