ಕುಣಿಗಲ್
ಕುಣಿಗಲ್ : ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸಲು ಸಚಿವರಿಗೆ ವಿದ್ಯಾರ್ಥಿಗಳ ಒತ್ತಾಯ

ಕುಣಿಗಲ್ : ಸಾವಿರಾರು ಮಂದಿ ವಿದ್ಯಾಭ್ಯಾಸ ಮಾಡುವ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡು ಸೋರುತ್ತಿರುವುದರಿಂದ ವಿದ್ಯಾರ್ಥಿಗಳು ನೆಮ್ಮದಿಯಿಂದ ಕೂತು ಪಾಠ ಕೇಳಲು ಆಗುತ್ತಿಲ್ಲ, ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ತುಂಬಾ ಅನಾನುಕೂಲವಾಗುತ್ತಿದೆ ಇದನ್ನು ಸರಿಪಡಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ಥ್ ನಾರಾಯಣ್ ಅವರಿಗೆ ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸಚಿವರು ವಿಧಾನ ಪರಿಷತ್ ಚುನಾವಣಾ ಪ್ರಚಾರಕ್ಕೆ ಬರುವುದನ್ನ ಅರಿತು ನೂರಾರು ವಿದ್ಯಾರ್ಥಿಗಳು ಕಾಲೇಜಿನ ಗೇಟ್ ಮುಂಭಾಗ ಜಮಾವಣೆಗೊಂಡು ಅವರು ಬರುವುದನ್ನೇ ಕಾಯ್ದು ನಿಂತು ಬಂದ ನಂತರ ಸ್ವಾಗತಿಸಿ ಕಾಲೇಜಿನ ದುಸ್ಥಿತಿಯ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ಕಾಲೇಜು ಕಟ್ಟಡವನ್ನು ನಿರ್ಮಾಣ ಮಾಡಿ ವರ್ಷಗಟ್ಟಲೆ ಕಳೆದಿವೆ ಸುಮಾರು 1ಸಾವಿರ ವಿದ್ಯಾರ್ಥಿಗಳು ಕೂತು ಪಾಠ ಕೇಳುವ ಎಲ್ಲ ವಿಭಾಗದ ಕೊಠಡಿಗಳು ಸಂಪೂರ್ಣವಾಗಿ ಸೋರುತ್ತಿವೆ ಇದರಿಂದ ವಿದ್ಯಾರ್ಥಿಗಳು ಕ್ಲಾಸ್ ರೂಮಿನಲ್ಲಿ ನೆಮ್ಮದಿಯಿಂದ ಕುಳಿತು ಪಾಠ ಕೇಳಲು ತುಂಬಾ ತೊಂದರೆಯಾಗುತ್ತಿದೆ ಆಗಿಂದಾಗ್ಗೆ ಮೇಲ್ಚಾವಣಿಯ ಪ್ಲಾಸ್ಟ್ರಿಂಗ್ ಅಲ್ಲಲ್ಲಿ ಕುಸಿಯುತ್ತಿದೆ ಆಕಸ್ಮಿಕವಾಗಿ ಮೇಲ್ಚಾವಣಿ ಕುಸಿದು ಬಿದ್ದರೆ ವಿದ್ಯಾರ್ಥಿಗಳ ಪೋಷಕರ ಪಾಡೇನಾಗಬೇಕು, ಸ್ಮಾರ್ಟ ಕೋಚಿಂಗ್ ವ್ಯವಸ್ಥೆಯೂ ಕೂಡ ಹಾಳಾಗಿದೆ ಹೆಚ್ಚು ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದಲೇ ಬರುವುದರಿಂದ ಅವರುಗಳ ಉನ್ನತ ವಿದ್ಯಾಭ್ಯಾಸಕ್ಕೆ ಕುಂದುಂಟಾಗುತ್ತಿದೆ. ಈ ಸಂಬಂಧ ಕಾಲೇಜಿನ ಆಡಳಿತ ಮಂಡಳಿಯವರ ಗಮನಕ್ಕೆ ತಂದರು ಏನೂ ಪ್ರಯೋಜನವಾಗಿಲ್ಲ ಆದ್ದರಿಂದ ಸಚಿವರು ನೂತನ ಕೊಠಡಿಗಳ ನಿರ್ಮಾಣಕ್ಕೆಕ್ರಮ ಕೈಗೊಂಡು ಕಾಲೇಜಿಗೆ ಬೇಕಾಗಿರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಬೇಕೆಂದು ಮನವಿ ಪತ್ರದಲ್ಲಿ ಕೇಳಿಕೊಂಡಿದ್ದಾರೆ. ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಸಚಿವರು ಕುಣಿಗಲ್ ಪ್ರಥಮ ದರ್ಜೆ ಕಾಲೇಜಿಗೆ ಬೇಕಾಗಿರುವ ನೂತನ ಕಟ್ಟಡ ಹಾಗೂ ಮೂಲ ಸೌಕರ್ಯಗಳನ್ನು ಸರ್ಕಾರದ ಹಣದಿಂದಾಗಲಿ ಅಥವ ನನ್ನ ಸ್ವಂತ ಹಣದಿಂದಾಗಲಿ ಅಭಿವೃದ್ಧಿ ಪಡಿಸಿ ಗುಣಮಟ್ಟದ ಶಿಕ್ಷಣ ಸಿಗುವ ರೀತಿ ಮಾಡಿ ಉತ್ತಮ ಭವಿಷ್ಯ ಕಲ್ಪಿಸಿಕೊಡುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪಿಎಲ್ ಡಿ ಬ್ಯಾಂಕ್ ರಾಜ್ಯಾಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಡಿ ಕೃಷ್ಣಕುಮಾರ್ ವಿಧಾನ ಪರಿಷತ್ ಅಭ್ಯರ್ಥಿ ಲೋಕೇಶ್ ಒಳಗೊಂಡಂತೆ ಮತ್ತಿತರರು ಉಪಸ್ಥಿತರಿದ್ದರು.
Attachments area