ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿ ವೈ.ಕೆ.ಬಾಲಕೃಷ್ಣಪ್ಪ ಅಧಿಕಾರ ಸ್ವೀಕಾರ
ತುಮಕೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ(ಪ್ರಭಾರ)ರಾಗಿ ರೇಷ್ಮೆ ಇಲಾಖೆಯ ಉಪನಿರ್ದೇಶಕ ವೈ.ಕೆ.ಬಾಲಕೃಷ್ಣಪ್ಪ ಅಧಿಕಾರ ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ಪ್ರಭಾರ ವ್ಯವಸ್ಥಾಪಕರಾಗಿದ್ದ ಸರೋಜಾದೇವಿ ಅವರ ಮೇಲೆ ಶಿಸ್ತುಕ್ರಮ ಜರುಗಿಸುವಂತೆ ಜಿ.ಪಂ.ಸಿಇಒ ಡಾ.ಕೆ.ವಿದ್ಯಾಕುಮಾರಿ ಅವರು ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ, ಪ್ರಭಾರ ಜಿಲ್ಲಾ ವ್ಯವಸ್ಥಾಪಕರಾಗಿದ್ದ ಸರೋಜಾದೇವಿ ಅವರನ್ನು, ತುಮಕೂರು ತಾಲ್ಲೂಕು ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಲು ಸೂಚಿಸಿ, ಆದೇಶ ಹೊರಡಿಸಿದ್ದಾರೆ.
ಸರೋಜಾದೇವಿ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ರೇಷ್ಮೆ ಇಲಾಖೆ ಉಪನಿರ್ದೇಶಕರಾಗಿದ್ದ ವೈ.ಕೆ.ಬಾಲಕೃಷ್ಣಪ್ಪ ಅವರಿಗೆ ಪ್ರಭಾರ ಜಿಲ್ಲಾವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿತ್ತು, ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿ ವೈ.ಕೆ.ಬಾಲಕೃಷ್ಣಪ್ಪ ಅವರು ಅಧಿಕಾರ ಸ್ವೀಕರಿಸಿದ್ದಾರೆ.