ತುಮಕೂರು: ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ
ತುಮಕೂರು: ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ಎಡಬಲ ಸಮುದಾಯಗಳ ಸಮನ್ವಯ ಸಮಿತಿ, ಛಲವಾದಿ ಮಹಾಸಭಾ ವೇದಿಕೆ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಶನಿವಾರ 204ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಯಿತು.
ನಗರದ ಟೌನ್‌ಹಾಲ್ ವೃತ್ತದಲ್ಲಿ ಸೇರಿದ ವಿವಿಧ ಸಮಿತಿಗಳ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿದರು.
ಈ ವೇಳೆ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್ ಮಾತನಾಡಿ, ಮಹಾರ್ ಸೈನಿಕರ ಶೌರ್ಯದ ಸ್ಮರಣಾರ್ಥ ಪ್ರತಿ ವರ್ಷ ಜನವರಿ 1 ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
`ಪೇಶ್ವೆಗಳು ಜಾತಿ ವ್ಯವಸ್ಥೆಯಡಿ ಆಡಳಿತ ನಡೆಸುತ್ತಿದ್ದರು. ಪೇಶ್ವೆ ಬಾಜಿರಾಯನನ್ನು ಸೋಲಿಸಲು ಬಂದ ಬ್ರಿಟಿಷರು ಮಹಾರ ಯೋಧರ ನೆರವು ಕೋರಿದ್ದರು. ಆದರೆ, ಮಹಾರ ಯೋಧರು ಪೇಶ್ವೆಗೆ ಷರತ್ತಿನ ಬೆಂಬಲ ನೀಡಲು ಆತನ ಬಳಿಗೆ ತನ್ನ ದಂಡನಾಯಕ ಸಿದ್ಧನಾಯಕನನ್ನು ಕಳಿಸಿದರು ಎಂದರು.
ಬಾಜಿರಾಯ ಬ್ರಾಹ್ಮಣ ಸಂಪ್ರದಾಯ ಪಾಲಿಸುವುದೇ ತನ್ನ ಧರ್ಮ ಎಂದು ಹೇಳಿ, ಅಸ್ಪೃಶ್ಯ ಯೋಧರ ಬೆಂಬಲ ತಿರಿಸ್ಕರಿಸಿ, ಸಿದ್ಧನಾಯಕನನ್ನು ಅಪಮಾನಿಸಿ ಕಳಿಸುತ್ತಾನೆ. ಇದರಿಂದ ಆಕ್ರೋಶಗೊಂಡ ಮಹಾರ್ ಯೋಧರು ಬಾಜಿರಾಯನ ಬೆನ್ನು ಮೂಳೆ ಮುರಿಯಲು ಬ್ರಿಟಿಷರ ಪರ ಯುದ್ಧ ಮಾಡಲು ಒಪ್ಪಿಕೊಳ್ಳುತ್ತಾರೆ’ ಎಂದು ತಿಳಿಸಿದರು.
`1818ರ ಜನವರಿ 1 ರಂದು ಈಗಿನ ಪುಣೆ ಹತ್ತಿರದ ಭೀಮಾ ನದಿ ದಂಡೆ ಮೇಲಿನ ಕೋರೆಗಾಂವ್ ಬಳಿ 30 ಸಾವಿರ ಸೈನಿಕರಿದ್ದ ಪೇಶ್ವೆ ಹಾಗೂ 500 ಮಹಾರ್ ಯೋಧರ ಮಧ್ಯೆ ಯುದ್ಧ ನಡೆದು ಬ್ರಿಟಿಷರ ಕೊರಳಿಗೆ ವಿಜಯ ಮಾಲೆ ಬಿದ್ದಿತು. ಬಾಜಿರಾಯ ತಪ್ಪಿಸಿಕೊಂಡು ಓಡಿ ಹೋಗುತ್ತಾನೆ ಎಂದು ವಿವರಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ, `ಮಹಾರ್ ಯೋಧರ ತ್ಯಾಗ ವ್ಯರ್ಥವಾಗಲು ಬಿಡಬಾರದು. ಅವರ ಸಮಾನತೆಯ ಕನಸು ನನಸಾಗಿಸುವುದು ನಮ್ಮ ಗುರಿಯಾಗಬೇಕು, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಪ್ರತಿ ವರ್ಷ ಭೀಮಾ ಕೋರೆಗಾಂವ್‌ಗೆ ಭೇಟಿ ನೀಡಿ ಹುತಾತ್ಮರ ಸ್ಮರಣಾರ್ಥ ಬ್ರಿಟಿಷ್ ಸರ್ಕಾರ ನಿರ್ಮಿಸಿರುವ ವೀರ ಯೋಧರ ಸ್ಮಾರಕಕ್ಕೆ ಗೌರವ ಸಲ್ಲಿಸುತ್ತಿದ್ದರು ಎಂದು ತಿಳಿಸಿದರು.
1818 ರ ಜನವರಿ 1 ರಂದು ಮಹಾರಾಷ್ಟçದ ಭೀಮಾ ತೀರದಲ್ಲಿ ಸುಮಾರು 28,000 ಪೇಶ್ವೆಗಳನ್ನ ಸೆದೆ ಬಡಿದು ವಿಜಯ ಸಾಧಿಸಿದ್ದು ಇದನ್ನು ನಮ್ಮ ಇತಿಹಾಸದಲ್ಲಿ ಎಲ್ಲಿಯೂ ನಮೂದಿಸಿರುವುದಿಲ್ಲ ಇದು ಈ ದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ತಾರತಮ್ಯ ಇಂತಹ ಅದೆಷ್ಟೋ ಮುಚ್ಚಿಟ್ಟ ಇತಿಹಾಸವನ್ನ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಹೊರತೆಗೆದು ನಮ್ಮೆಲ್ಲರಿಗೂ ತಿಳಿಸಿದ್ದಾರೆ ಇವತ್ತಿನ ಯುವ ಸಮುದಾಯ ಅದನ್ನ ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಳ್ಳಬೇಕು ಎಂದರು.
ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಮಾತನಾಡಿ, ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪöÈಶ್ಯತೆ, ಮೇಲುಕೀಳುಗಳ ವಿರುದ್ಧ ನಿಂತು ಮಾನವೀಯ ವೌಲ್ಯಗಳನ್ನು ಪಡೆದು ಕೊಳ್ಳಲು ಹಂಬಲಿಸುವ ಮಹಾರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟವಾಗಿದೆ ಎಂದರು.
ಕೋರೆಗಾAವ್ ಯುದ್ದದಲ್ಲಿ 30 ಸಾವಿರ ಪೇಶ್ವೆ ಸೈನಿಕರನ್ನು ಸೋಲಿಸಿದ 500 ಮಹಾರ್ ಸೈನಿಕರ ಪೈಕಿ 22 ಮಂದಿ ಸೈನಿಕರು ಮರಣ ಹೊಂದುತ್ತಾರೆ. ಅವರ ನೆನಪಿಗಾಗಿ ಭೀಮನದಿ ತೀರದಲ್ಲಿ ವಿಜಯಸ್ಥಂಭ ಸ್ಥಾಪಿಸಲಾಗಿದ್ದು, ಪ್ರತಿವರ್ಷ ಕೋರೆಗಾಂವ್‌ಗೆ ಜ.1ರಂದು ಸುಮಾರು 5 ಲಕ್ಷದಿಂದ 6 ಲಕ್ಷದವರೆಗೆ ಜನರು ಸೇರುತ್ತಾರೆ ಎಂದರು.
ಈ ಸಂದರ್ಭದಲ್ಲಿ ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ನರಸಿಂಹರಾಜು, ಮಹಾನಗರಪಾಲಿಕೆ ವಿರೋಧ ಪಕ್ಷದ ನಾಯಕ ಜೆ.ಕುಮಾರ್, ನಗರಸಭೆ ಮಾಜಿ ಉಪಾಧ್ಯಕ್ಷ ಹನುಮಂತರಾಯಪ್ಪ, ಗೃಹರಕ್ಷಕದಳದ ಮಾಜಿ ಕಮಾಂಡೆಂಟ್ ರಾಕ್‌ಲೈನ್ ರವಿಕುಮಾರ್, ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವಸೈನ್ಯ ರಾಜ್ಯಾಧ್ಯಕ್ಷ ನಗುತ ರಂಗನಾಥ್, ಶ್ರೀನಿವಾಸ್, ದಸಂಸ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಹೆಚ್.ಬಿ.ರಾಜೇಶ್, ನಗರಾಧ್ಯಕ್ಷ ಲಕ್ಷಿö್ಮನಾರಾಯಣ್, ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಸಿದ್ಧಲಿಂಗಯ್ಯ, ಯುವ ಘಟಕದ ಅಧ್ಯಕ್ಷ ಕೆ.ಗೋವಿಂದರಾಜು, ಅಂಬೇಡ್ಕರ್ ಪ್ರಚಾರ ಸಮಿತಿ ನಗರಾಧ್ಯಕ್ಷ ಮನು ಟಿ., ದಸಂಸ ನಗರ ಉಪಾಧ್ಯಕ್ಷ ಮಾರುತಿ, ಕೆ.ಎಸ್.ರಂಗಸ್ವಾಮಯ್ಯ, ಶಿವರಾಜ್ ಕುಚ್ಚಂಗಿ, ರಜನೀಕಾಂತ್, ಗಂಗಾಧರ್, ಕಿರಣ್, ಮುತ್ತುರಾಜ್ ಜೆ.ಎನ್., ಸಾಗರ್ ಮುಂತಾದವರು ಭಾಗವಹಿಸಿದ್ದರು.