ತುಮಕೂರು ನಗರ
ರಸ್ತೆ ಬದಿಯಲ್ಲಿದ್ದ ಮರ ಕಡಿದವರ ವಿರುದ್ದ ಕಠಿಣ ಕ್ರಮ : ಶಾಸಕ ಜಿ.ಬಿ. ಜ್ಯೋತಿಗಣೇಶ್
ತುಮಕೂರು : ನಗರದ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ರಸ್ತೆಯಲ್ಲಿರುವ ಶ್ರೀ ಸಿದ್ದಗಂಗಾ ಆಸ್ಪತ್ರೆಯ ಮುಂಭಾಗ ರಸ್ತೆಯ ಬದಿಯಲ್ಲಿ ಇದ್ದಂತಹ ಮರವನ್ನು ಕಡಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತುಮಕೂರು ನಗರದ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದರು.
ಈಗಾಗಲೇ ಅರಣ್ಯ ಇಲಾಖೆಯವರು ಈ ಸಂಬಂಧವಾಗಿ ಎಫ್.ಐ.ಆರ್. ಅನ್ನು ದಾಖಲಿಸಿದ್ದಾರೆ, ಮಹಾನಗರ ಪಾಲಿಕೆ ವತಿಯಿಂದ ತುಮಕೂರು ನಗರದಲ್ಲಿ ಜಾಹೀರಾತು ಫಲಕ ಅಳವಡಿಸುಲು ಅನುಮತಿ ಪಡೆದಿರುವ ಗುತ್ತಿಗೆದಾರರು ಈ ಕೆಲಸವನ್ನು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಗುತ್ತಿಗೆದಾರರನ್ನು ಅನರ್ಹಗೊಳಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಈಗಾಗಲೇ ಸೂಚನೆಯನ್ನು ನೀಡಿದ್ದೇನೆ, ತಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.