ವಿದ್ಯಾರ್ಥಿಗಳು ಪ್ರಜ್ಞಾವಂತ ಮತದಾರರಾಗಿ ಪ್ರಜಾಪ್ರಭುತ್ವ ಬಲಪಡಿಸಿ : ಡಾ.ಎಸ್.ಟಿ.ರಂಗಪ್ಪ
ರಾಷ್ಟ್ರೀಯ ಮತದಾರರ ದಿನದಂದು ಪ್ರತಿಜ್ಞಾವಿಧಿ ಬೋಧನೆ
ಶಿರಾ : ಪ್ರಜ್ಞಾವಂತ ಮತದಾರರಾಗಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಬೇಕೆಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಟಿ.ರಂಗಪ್ಪ ಕರೆ ನೀಡಿದರು.
ಅವರು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಿ, ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ತಮ್ಮ ಗ್ರಾಮಗಳಲ್ಲಿ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶಾರದಮ್ಮ.ಜಿ. ಅವರು ರಾಷ್ಟ್ರೀಯ ಮತದಾರರ ದಿನದ ಕುರಿತು ಮಾಹಿತಿ ನೀಡುವುದರ ಜೊತೆಗೆ ಮತದಾನದ ಮಹತ್ವವನ್ನು ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಐ.ಕ್ಯು.ಎ.ಸಿ. ಸಂಚಾಲಕರಾದ ಡಾ. ನಾಗಭೂಷಣಯ್ಯ.ಬಿ.ಎನ್., ಇಂಗ್ಲೀಷ್ ಸಹಾಯಕ ಪ್ರಾಧ್ಯಾಪಕರಾದ ಹೇಮಲತಾ.ಬಿ.ಆರ್., ಇತಿಹಾಸ ಸಹಾಯಕ ಪ್ರಾಧ್ಯಾಪಕರಾದ ಧರಣೇಂದ್ರಕುಮಾರಿ. ಹೆಚ್.ಆರ್., ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಸುಕನ್ಯ.ಟಿ.ಎಲ್., ಎನ್.ಸಿ.ಸಿ. ಅಧಿಕಾರಿಯಾದ ಬಂಡೀರಂಗನಾಥ್ ಸೇರಿದಂತೆ ಹಲವರು ಹಾಜರಿದ್ದರು.