ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರ : ಸಾರ್ವಜನಿಕರ ಆರೋಪ
ಕುಣಿಗಲ್ : ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಪಟ್ಟಣದ ಕೆಆರ್ಎಸ್ ಅಗ್ರಹಾರದ ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ಸರ್ಕಾರಿ ಸಬ್ ರಿಜಿಸ್ಟ್ರಾರ್ ಕಚೇರಿ ಆವರಣದಲ್ಲಿ ಸಾರ್ವಜನಿಕರು ಪತ್ರಿಕೆಯೊಂದಿಗೆ ಮಾತನಾಡಿ ಕುಣಿಗಲ್ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಜಮೀನಿನ ಈ, ಸಿ, ಹಳೆ ನೋಂದಣಿ ಪತ್ರ ಪಡೆಯಲು ಜಮೀನುಗಳ ಹಾಗೂ ನಿವೇಶನಗಳ ಹೊಸ ನೋಂದಣಿ ಒಳಗೊಂಡಂತೆ ಇನ್ಯಾವುದೇ ಸಣ್ಣಪುಟ್ಟ ಕೆಲಸಗಳಾಗಬೇಕಾದರೆ ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿಗೆ ಹಣವನ್ನು ಕೊಟ್ಟವರಿಗೆ ಮಾತ್ರ ಸಕಲವೂ ಕ್ಷಣಾರ್ಧದಲ್ಲಿ ಸಿಗುತ್ತದೆ ಇಲ್ಲದಿದ್ದರೆ ಸಾರ್ವಜನಿಕರು ಇನ್ಯಾವುದೇ ಸಣ್ಣಪುಟ್ಟ ಕೆಲಸ ಮಾಡಿಸಿಕೊಳ್ಳಬೇಕಾದರೆ ಕಚೇರಿಗೆ ಅಲೆಯುವ ಪರಿಸ್ಥಿತಿ ಇದೆ ಲಂಚವಿಲ್ಲದೆ ಯಾವುದೇ ಕೆಲಸವನ್ನು ನಡೆಯುವುದೇ ಇಲ್ಲ ಕಚೇರಿಯಲ್ಲಿ ಸಾರ್ವಜನಿಕರು ಯಾವುದಾದರೂ ಸಣ್ಣ ಪುಟ್ಟ ವಿಚಾರಗಳಿಗೆ ಸಬ್ ರಿಜಿಸ್ಟ್ರಾರ್ ರನ್ನು ಪ್ರಶ್ನೆ ಮಾಡಿದರೆ ಸಬ್ ರಿಜಿಸ್ಟ್ರಾರ್ ಕಚೇರಿಯ ಕೆಲವು ದಲ್ಲಾಳಿಗಳು ಮಧ್ಯ ಪ್ರವೇಶ ಮಾಡುತ್ತಾರೆ ಅಲ್ಲದೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮಧ್ಯವರ್ತಿಗಳಿಲ್ಲದೆ ಯಾವುದೇ ಕೆಲಸಗಳು ನಡೆಯುವುದಿಲ್ಲ ಇದಲ್ಲದೆ ಕಚೇರಿಯಲ್ಲಿ ಸಬ್ ರಿಜಿಸ್ಟ್ರಾರ್ ಒಳಗೊಂಡಂತೆ ಕರ್ತವ್ಯ ನಿರ್ವಹಿಸುವ ಸರ್ಕಾರಿ ನೌಕರರು ಸರಿಯಾದ ವೇಳೆಗೆ ಕಚೇರಿಗೆ ಬರುವುದಿಲ್ಲ ಬಂದರು ಟೀ, ಕಾಫಿ ಗೆಂದು ಆಚೆ ಹೋದರೆ ಸಾರ್ವಜನಿಕರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಬಂದೊದಗಿದೆ ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಿಸಿಟಿವಿ ಅಳವಡಿಸಿ ಎಂದು ಸರ್ಕಾರದ ಆದೇಶವಿದ್ದರೂ ಅಳವಡಿಸಿಲ್ಲ, ಕುಡಿಯುವ ನೀರುಲಭ್ಯವಿಲ್ಲ,ಶೌಚಾಲಯ ಒಳಗೊಂಡಂತೆ ಸಾರ್ವಜನಿಕರಿಗೆ ಬೇಕಾಗುವ ಇನ್ನಿತರೆ ಮೂಲಭೂತ ಸೌಲಭ್ಯಗಳು ಇಲ್ಲದಿರುವುದು ಎದ್ದು ಕಾಣುತ್ತದೆ ಎಂದು ಹತ್ತು ಹಲವಾರು ಆರೋಪಗಳನ್ನು ಮಾಡಿದರು ಈ ಸಂಬಂಧ ಶಾಸಕರು ಒಮ್ಮೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.