ಬಗರ್ ಹುಕ್ಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರಾಗಿ ನವೀನ್ ಆಯ್ಕೆ
ಪಾವಗಡ : ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಬಗರ್ ಹುಕ್ಕುಂ ಸಾಗುವಳಿ ಸಕ್ರಮೀಕರಣ ಸಮಿತಿ ನೂತನ ಸದಸ್ಯರಾದ ಕಡಪಲಕೆರೆ ನವೀನ್ ತಿಳಿಸಿದರು.
ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತಪರ ಸಂಘಟನೆಗಳ ವತಿಯಿಂದ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ತಾಲೂಕು ಹಿಂದುಳಿದ ಮತ್ತು ಬರಪೀಡಿತ ಪ್ರದೇಶವಾಗಿದ್ದು ಸರ್ಕಾರದ ಜನಪರ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಬಡವರ್ಗದ ಜನರ ಏಳಿಗೆಗೆ ಶ್ರಮಿಸಲಾಗುವುದು ಎಂದರು.
ಇದೇ ವೇಳೆ ತಾಲೂಕಿನ ವಿವಿದ ದಲಿತಪರ ಸಂಘಟನೆಗಳ ಪರವಾಗಿ ನೂತವಾಗಿ ಬಗರ್ ಹುಕ್ಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರಾಗಿ ಆಯ್ಕೆಯಾಗಿರುವ ಕಡಪಲಕೆರೆ ನವೀನ್ ರವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ರಾಮಾಂಜಿನಪ್ಪ, ರೊಪ್ಪ ಗ್ರಾ.ಪಂ ಅಧ್ಯಕ್ಷ ರಾಮಾಂಜಿನಪ್ಪ, ಕೋಟಗುಡ್ಡ ಗ್ರಾ.ಪಂ ಸದಸ್ಯ ಕೃಷ್ಣಪ್ಪ, ಮುಖಂಡರಾದ ರಾಜಕುಮಾರ್, ಹನುಮಂತು, ಪ್ರಕಾಶ್, ನರಸಿಂಹಮೂರ್ತಿ, ದಲಿತ ಮುಖಂಡರಾದ ಮದ್ಲೇಟಪ್ಪ, ಸಿದ್ದಪ್ಪ, ಶಿವಲಿಂಗ, ನಲಿಗಾನಹಳ್ಳಿ ಮಂಜುನಾಥ್, ಮಾರುತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.