ತುಮಕೂರು
ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಮೈಲಪ್ಪ-ಉಪಾಧ್ಯಕ್ಷರಾಗಿ ದೊಡ್ಡಯ್ಯ ಅವಿರೋಧ ಆಯ್ಕೆ
ತುಮಕೂರು : ನಗರದ ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಪಾವಗಡ ಮೈಲಪ್ಪ ಹಾಗೂ ಉಪಾಧ್ಯಕ್ಷರಾಗಿ ಕುಣಿಗಲ್‌ನ ದೊಡ್ಡಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಬಿ.ಹೆಚ್. ರಸ್ತೆಯಲ್ಲಿರುವ ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿದ್ದ ಬಿ.ಕೆ. ಮಂಜುನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು ಹಾಗೂ ಉಪಾಧ್ಯಕ್ಷರ ನಿಧನರಾದ ಹಿನ್ನೆಲೆಯಲ್ಲಿ ಎರಡು ಸ್ಥಾನಗಳಿಗೆ ಆಯ್ಕೆಯ ಮಾಡುವ ಸಂಬಂಧ ಸಂಘದ ಕಚೇರಿಯಲ್ಲಿ ಸದಸ್ಯರುಗಳು ಸಭೆ ಸೇರಿ ಚರ್ಚೆ ನಡೆಸಿದ ಒಮ್ಮತದ ನಿರ್ಣಯ ಕೈಗೊಂಡಿದ್ದರಿಂದ ಅಧ್ಯಕ್ಷರಾಗಿ ಪಾವಗಡದ ಮೈಲಪ್ಪ, ಉಪಾಧ್ಯಕ್ಷರಾಗಿ ಕುಣಿಗಲ್‌ನ ದೊಡ್ಡಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಕಾಂತರಾಜು ಘೋಷಣೆ ಮಾಡಿದರು.
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಮೈಲಪ್ಪ ಹಾಗೂ ಉಪಾಧ್ಯಕ್ಷ ದೊಡ್ಡಯ್ಯ ಅವರನ್ನು ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗ ಅಭಿನಂದಿಸಿದರು.