ಕೊರಟಗೆರೆ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮವಹಿಸಿ : ಡಾ.ಜಿ.ಪರಮೇಶ್ವರ್

ಕೊರಟಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ

ಕೊರಟಗೆರೆ : ಕಾಂಗ್ರೆಸ್ ಪಕ್ಷದ ಶಾಸಕರನ್ನು ಅಧಿಕಾರದಾಸೆ ಹಾಗೂ ಹಣದ ಆಮೀಶ ತೋರಿಸಿ ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅಧಿಕಾರ ನಡೆಸುತ್ತಿರುವ ರಾಜ್ಯ ಸರ್ಕಾರ ಜನತೆಗೆ ಎಂತಹ ಆಡಳಿತ ನೀಡ ಬಹುದು ಎಂದು ಮತದಾರರಿಗೆ ತಿಳಿದಿದ್ದು ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಅವರು ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ ಪರಿಶೀಲನಾ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ಬಡ ಜನತೆಗೆ ನೀಡಿದ ಉಚಿತ ಪಡಿತರ ಆಹಾರ ಕಡಿತಗೊಳಿಸಿದ್ದು ಅದರೊಂದಿಗೆ ಇನ್ನಿತರ ಜನಪರ ಕಾರ್ಯಕ್ರಮಗಳ ಯೋಜನೆಯನ್ನು ಕಡೆಗಣಿಸಿರುವುದರ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ತಿಳಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕಿತ್ತೊಗೆದು ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಲು ಎಲ್ಲ ಕಾರ್ಯಕರ್ತರ ಬದ್ದತೆ ಪ್ರಮುಖವಾಗಿದೆ, ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಪಕ್ಷದ ಯುವ ಕಾರ್ಯಕರ್ತರು ಸಕ್ರೀಯವಾಗಿ ಭಾಗವಹಿಸಿ ನಿರ್ದಿಷ್ಟ ಗುರಿಯನ್ನು ಸಾಧಿಸಬೇಕಾಗಿದೆ, ರಾಷ್ಟ್ರಮತ್ತು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಬೇಕಾದರೆ ನಿಮ್ಮೆಲ್ಲರ ಇಚ್ಚಾಶಕ್ತಿ ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಮಾಡಿಸಬೇಕಾದರೆ ಪತ್ರಿಯೊಬ್ಬ ಕಾರ್ಯಕರ್ತರು ಸದಸ್ಯತ್ವ ಅಭಿಯಾನದ ಬಗ್ಗೆ ಆಸಕ್ತಿ ವಹಿಸಿ ಬದ್ದತೆಯಿಂದ ಕಾರ್ಯನಿರ್ವಹಿಸಿ ಪ್ರತಿ ಬೂತ್ ಮಟ್ಟದಲ್ಲೂ ನಿರೀಕ್ಷಿತ ಮಟ್ಟದಲ್ಲಿ ಸದಸ್ಯತ್ವವನ್ನು ಮಾಡಬೇಕಾಗಿದೆ, ರಾಹುಲ್ ಗಾಂಧೀಯವರ ಕನಸಿನಂತೆ ಭವಿಷ್ಯದಲ್ಲಿ ದೇಶವನ್ನು ಪಾರದರ್ಶಕವಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಿರ್ಮಾಣ ಮಾಡಲು ಎಲ್ಲರೂ ಕೈಜೋಡಿಸೋಸಬೇಕು ಎಂದು ತಿಳಿಸಿದರು.
ದೇಶದಲ್ಲಿ ವಿಶ್ವ ಮಹಿಳಾದಿನಾಚರನೆ ಆಚರಿಸುತ್ತಿದ್ದು ಪ್ರಪಂಚದ ಜನಸಂಖ್ಯೆಯಲ್ಲಿ ಅರ್ಥದಷ್ಟು ಇರುವ ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಎಲ್ಲಾ ರಂಗದಲ್ಲೂ ಮಹಿಳೆ ಪುರುಷರಿಗೆ ಸಮಾನಾಗಿ ದುಡಿಯುತ್ತಿ ದ್ದಾರೆ, ಸಾರ್ಥಕ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ ಎಂಬು ಸತ್ಯ ಹಾಗೇಯೇ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರು ಕೈಜೋಡಿಸುವಿಕೆ ಅಗತ್ಯವಾಗಿದೆ ಮಹಿಳೆಯರು ಬದ್ದತೆ ಮತ್ತು ನಿಷ್ಠೆಯಿಂದ ಕೆಲಸ ಮಾಡುತ್ತಾರೆ, ಯಾವುದೇ ಕೆಲಸ ನೀಡಿದರು ಅವರು ಅದರಲ್ಲಿ ಯಶಸ್ವಿಯಾಗುತ್ತಾರೆ, ತಾಯಿ ಇಲ್ಲದೆ ಪ್ರಪಂಚವೇ ಇಲ್ಲ ಇಂತಹ ತಾಯಿಗೆ ಪ್ರತಿಯೊಬ್ಬರೂ ನಮನ ಸಲ್ಲಿಸಬೇಕು ಎಂದು ತಿಳಿಸಿದರು,
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ಬಾಲಕೃಷ್ಣ, ಅಮರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ, ನಗರಸಭಾ ಮಾಜಿ ಸದಸ್ಯ ವಾಲೇಚಂದ್ರಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್, ಅರಕೆರೆ ಶಂಕರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಮ್ಮ, ಶೈಲಜಾ, ಕವಿತಾ, ಯುವಕಾಂಗ್ರೆಸ್ ಅಧ್ಯಕ್ಷ ವಿನಯ್ ಕುಮಾರ್, ಪ.ಪಂ.ಸದಸ್ಯರುಗಳಾದ ಕೆ.ಆರ್.ಓಬಳರಾಜು, ನಾಗರಾಜು, ನಂದೀಶ್, ಕೆ.ಎಂ.ಫ್. ನಿರ್ದೇಶಕ ಈಶ್ವರಪ್ಪ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಎಲ್.ರಾಜಣ್ಣ, ಜಿ.ಪಂ.ಮಾಜಿ ಅಧ್ಯಕ್ಷ ಜಾಲಿಗಿರಿ ಕೃಷ್ಣಮೂರ್ತಿ, ಮಾಜಿ ಸದಸ್ಯ ಪ್ರಸನ್ನ ಕುಮಾರ್, ಗ್ರಾ.ಪಂ. ಮಾಜಿ ಸದಸ್ಯರುಗಳಾದ ಬುಕ್ಕಪಟ್ಟಣ ಲಕ್ಷ್ಮೀ, ಡಿಜಿಟಲ್ ತಾಲೂಕು ಸಂಯೋಜ ಕರಾದ ಕೆ.ವಿ.ಮಂಜುನಾಥ್, ಹೇಮಲತಾ, ಮುಖಂಡರುಗಳಾದ ರುದ್ರಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker