ತಿಪಟೂರು

ಶೈಕ್ಷಣಿಕ ಪ್ರಗತಿಗೆ ಮಠಗಳ ಪಾತ್ರ ಮಹತ್ವದ್ದು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ತಿಪಟೂರು : ರಾಜ್ಯದಲ್ಲಿ ಮಠಗಳು ಶೈಕ್ಷಣಿಕ ಪ್ರಗತಿಗೆ ತನ್ನದೇ ಆದಂತಹ ಕೊಡುಗೆ ನೀಡಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಆಚಾರ-ವಿಚಾರ, ಸಂಸ್ಕøತಿ, ಮಾನವೀಯ ಮೌಲ್ಯಗಳನ್ನು ತಿಳಿಸಿ ಸುಸಂಸ್ಕøತರನ್ನಾಗಿಸುತ್ತಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾಮಠದ ಚೌಡೇಶ್ವರಿ ಪ್ರೌಢಶಾಲೆಯಲ್ಲಿ ಮಂಗಳವಾರ ಶಾರದಾ ಪೂಜೆ ಹಾಗೂ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇಂದಿನ ಸಮಾಜದಲ್ಲಿನ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿದ್ದು ಮಠಗಳಲ್ಲಿ ಶಿಕ್ಷಣ ಪಡೆದಂತಹ ವಿದ್ಯಾರ್ಥಿಗಳಿಲ್ಲಿ ಅನೇಕ ವಿಚಾರವಂತಿಕೆ ನಡೆಗಳು ಇರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ತನ್ನ ಶೈಕ್ಷಣಿಕ ಜೀವನದಲ್ಲಿ ಪರೀಕ್ಷೆಯೂ ಒಮದು ಯುದ್ಧದಂತಿದ್ದು ಅದಕ್ಕೆ ಸಾಕಷ್ಟು ಪ್ರಯತ್ನವನ್ನು ಮಾಡಿದರೆ ಮಾತ್ರವೇ ಉತ್ತೀರ್ಣವಾಗಿ ಯುದ್ಧದಲ್ಲಿ ಗೆಲ್ಲಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಇರುವ ಸಮಯವನ್ನು ಸದ್ಬಳಕೆ ಮಾಡಿಕೊಂಡು ಉತ್ತಮವಾದ ಅಂಕಗಳನ್ನು ತೆಗೆದುಕೊಳ್ಳಲು ಮುಂದಾಗಬೇಕು. ಈ ಬಾರಿ ಪರೀಕ್ಷೆಯಲ್ಲಿ ವಿಧಾನವನ್ನು ಬದಲಿಸಿದ್ದು ಪ್ರತಿ ಪ್ರಶ್ನೆಗೂ ಮತ್ತೊಂದು ಆಯ್ಕೆಯನ್ನು ನೀಡಿದ್ದು ಇದರ ಸದುಪಯೋಗವನ್ನು ವಿದ್ಯಾಥಿಗಳು ಮಾಡಿಕೊಳ್ಳಬೇಕು. ಪಠ್ಯಪುಸ್ತಕದ ಶೇ.80 ರಷ್ಟು ಪಠ್ಯಕ್ರಮದಲ್ಲಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅದ್ದರಿಂದ ಉತ್ತಮವಾಗಿ ಅಭ್ಯಾಸ ಮಾಡಿಕೊಂಡು ಪರೀಕ್ಷೆ ಬರೆಯುವಂತೆ ಶುಭ ಹಾರೈಸಿದರು.
ಆದಿಚುಂಚನಗಿರಿಶಾಖಾ ಮಠದ ಚಂದ್ರಶೇಖರನಾಥ ಸ್ವಾಮೀಜಿ ಮಾತನಾಡಿ ರಾಜ್ಯದಾದ್ಯಂತ ಶಿಕ್ಷಣ ಸಚಿವರಾಗಿ ತೀವ್ರ ಸಂಚಲ ಸೃಷ್ಠಿಸಿ, ಪಠ್ಯಕ್ರಮದಲ್ಲಿ ಬದಲಾವಣೆಯನ್ನು ತರುವ ದಿಟ್ಟ ನಿರ್ಧಾರ ಕೈಗೊಂಡಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ. ಅಲ್ಲದೇ ಪಠ್ಯಪುಸ್ತಕ, ಶಾಲೆಗಳ ಅಭಿವೃದ್ಧಿ, ಬಿಸಿಯೂಟ ಯೋಜನೆಯಲ್ಲಿ ಬದಲಾವಣೆ ಸೇರಿದಂತೆ ಹಲವು ವಿಚಾರಗಳಲ್ಲಿ ಬದಲಾವಣೆ ತಂದಿರುವುದು ಶ್ಲಾಘನೀಯ ಕಾರ್ಯವಾಗಿವೆ. ನಾಡಿನಾದ್ಯಂತ ಹಲವು ಮಠಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಸಹಕಾರಿಯಾಗಿವೆ. ಇಂತಹ ಮಠಗಳ ಕಾರ್ಯವನ್ನು ಬಳಸಿಕೊಂಡು ಸಮಾಜಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ನೀಡುವಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತ ಉಮಾಕಾಂತ್, ಶಾಲೆಯ ಮುಖ್ಯಶಿಕ್ಷಕಿ ಎಸ್.ಆರ್.ನಿರ್ಮಲ, ಶಿಕ್ಷಕರುಗಳಾದ ಎಚ್.ಬಿ.ಕುಮಾರಸ್ವಾಮಿ, ರಂಗಸ್ವಾಮಿ.ಟಿ., ಲಕ್ಷ್ಮೀದೇವಿ.ಜಿ., ದೇವಪಾರ್ಥ.ಎಂ., ಮಂಜುನಾಥ್, ಗ್ರಾ.ಪಂ.ಸದಸ್ಯ ಶ್ರೀನಿವಾಸ್ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker