
ತುಮಕೂರು : ಡಾ.ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ.
ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯೋತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿಯಾಗುತ್ತಿದ್ದಾರೆ.
ಇನ್ನೊಂದೆಡೆ ಗದ್ದುಗೆಗೆ ವಿಶೇಷ ಪೂಜೆ, ಅಭಿಷೇಕ, ನೆರವೇರಿಸಲಾಗುತ್ತಿದೆ. ಇಂದು ಬೆಳಿಗ್ಗೆ ಐದು ಗಂಟೆಯಿಂದಲೇ ವಿವಿಧ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಅಭಿಷೇಕ ನಡೆದಿವೆ.
ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು.
ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಬಳಿಕ ಶ್ರೀಗಳ ಕಂಚಿನ ಪ್ರತಿಮೆ ಮೆರವಣಿಗೆ ಮಾಡಲಾಯಿತು. ಬಳಿಕ ಶ್ರೀಗಳ 115ನೇ ಜನ್ಮದಿನೋತ್ಸವದ ಅಂಗವಾಗಿ 115 ಮಕ್ಕಳಿಗೆ ನಾಮಕರಣ ಶಾಸ್ತ್ರವನ್ನು ಸಹ ನೆರವೇರಿಸಲಾಯಿತು.
|
|