ಪಾವಗಡದಲ್ಲಿ ಡಾ.ಬಾಬು ಜಗಜೀವನ್ ರಾಮ್ ರವರ 115ನೇ ಜಯಂತಿ ಆಚರಣೆ
ಪಾವಗಡ: ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸಿ, ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಿ ಸರ್ವರಿಗೂ ಸಮಾನತೆಯ ಹಕ್ಕು ನೀಡಲು ಡಾ.ಬಾಬು ಜಗಜೀವನ್ ರಾಮ್ ರವರ ಪಾತ್ರ ಮಹತ್ವದ್ದಾಗಿದೆ ಎಂದು ಸಮಾಜ ಸೇವಕ ನೇರಳೆಕುಂಟೆ ನಾಗೇಂದ್ರ ಕುಮಾರ್ ತಿಳಿಸಿದರು.
ಮಂಗಳವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಡಾ.ಬಾಬು ಜಗಜೀವನ್ ರಾಮ್ ರವರ ಜಯಂತಿ ಅಂಗವಾಗಿ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ನೆರೆವೇರಿಸಿ ಮಾತನಾಡಿದರು.
ಡಾ.ಬಾಬು ಜಗಜೀವನ್ ರಾಮ್ ರವರು ಕೇಂದ್ರ ಸರ್ಕಾರದಲ್ಲಿ ಕೃಷಿ ಸಚಿವರಾಗಿದ್ದಾಗ ಹಸಿರು ಕ್ರಾಂತಿ ರೂಪಿಸಿ ಗಣನೀಯ ಬದಲಾವಣೆಗಳನ್ನು ತಂದು ರೈತರ ಏಳಿಗೆಗೆ ಶ್ರಮಿಸಿದ್ದರು, ಹಾಗೂ ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗಾಗಿ, ಜಾತಿ ಪದ್ದತಿ ನಿರ್ಮೂಲನೆಗಾಗಿ ಶ್ರಮಿಸಿರುವ ಬಾಬೂ ಜೀ ರವರ ಆದರ್ಶ ಮೌಲ್ಯಗಳನ್ನು ಎಲ್ಲರೂ ಪಾಲಿಸಬೇಕಿದೆ ಎಂದರು.
ದೇಶದಲ್ಲಿ ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಸೇರಿದಂತೆ ಹಲವು ಕ್ಷೇತ್ರಗಳ ಅಭಿವೃದ್ದಿಗೆ ಶ್ರಮಿಸಿರುವ ಬಾಬೂ ಜೀ ರವರ ಸೇವೆ ದೇಶಕ್ಕೆ ಮಾದರಿಯಾಗಿದೆ ಎಂದರು.
ಇದೇ ವೇಳೆ ಡಾ.ಬಾಬು ಜಗಜೀವನ್ ರಾಮ್ ರವರ 115ನೇ ಜಯಂತಿ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ತಳಿಗೆ ಗಣ್ಯರೊಂದಿಗೆ ತೆರೆಳಿ ಮಾಲಾರ್ಪಣೆ ಮಾಡಿ ಪೂಜೆ ನೆರೆವೇರಿಸಲಾಗಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ವರದರಾಜು, ಸಮಾಜ ಕಲ್ಯಾಣ ಇಲಾಖೆಯ ಶಿವಣ್ಣ, ನಾರಾಯಣಸ್ವಾಮಿ, ಸಮಾಜ ಸೇವಕ ನೇರಳೆಕುಂಟೆ ನಾಗೇಂದ್ರ ಕುಮಾರ್, ಸಿಡಿಪಿಒ ನಾರಾಯಣಪ್ಪ, ಅರಣ್ಯ ಇಲಾಖೆಯ ಸತೀಶ್ ಚಂದ್ರ, ಮುಖಂಡರಾದ ಎಂ.ಕೆ.ನಾರಾಯಣಪ್ಪ, ಹನುಮಂತರಾಯಪ್ಪ, ನಾಗೇಶ್, ಡಿಜಿಎಸ್ ನಾರಾಯಣಪ್ಪ, ತಿಪ್ಪೇಸ್ವಾಮಿ, ಪೆದ್ದಣ್ಣ, ಸುಬ್ಬರಾಯಪ್ಪ, ನಾಗರಾಜು, ನಲಿಗಾನಹಳ್ಳಿ ಮಮಜುನಾಥ, ಬಂಗಾರಪ್ಪ, ಉಗ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ದಲಿತಪರ ಸಂಘಟನೆಗಳ ಮುಖಂಡರು ಇದ್ದರು.