ಕುಣಿಗಲ್
ಕುಣಿಗಲ್ : ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಜೆ.ಪಿ.ಶಿವಪ್ರಸಾದ್ (ಬಾಬು) ಅವಿರೋಧ ಆಯ್ಕೆ
ಕುಣಿಗಲ್ : ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಜೆ ಪಿ ಶಿವಪ್ರಸಾದ್ (ಬಾಬು) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂಬಂಧ ಪತ್ರಿಕೆಯೊಂದಿಗೆ ಮಾತನಾಡಿದ ಅವರು ನನ್ನನ್ನು ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದ ವಕೀಲರ ಸಂಘದ ಹಿರಿಯ ಹಾಗೂ ಕಿರಿಯ ಸದಸ್ಯರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದ ಅವರು ನಾನು ಸಂಘದ ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸುವ ವೇಳೆ ವಕೀಲರುಗಳ ಹಿತ ಕಾಪಾಡುವುದು ಹಾಗೂ ಸಂಘದ ಕೆಲವು ಧ್ಯೇಯೋದ್ದೇಶಗಳನ್ನು ಈಡೇರಿಸುವ ಜವಾಬ್ದಾರಿ ನನ್ನದಾಗಿರುತ್ತದೆ ಅದನ್ನು ಪ್ರಾಮಾಣಿಕವಾಗಿ ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.
ಅಧ್ಯಕ್ಷನಾಗಿ ಆಯ್ಕೆಯಾದ ನಂತರ ವಕೀಲರುಗಳು, ಹಿತೈಷಿಗಳು, ಸ್ನೇಹಿತರು ನನಗೆ ಅಭಿನಂದನೆಗಳನ್ನು ಸಲ್ಲಿಸಿರುವುದಕ್ಕೆ ನಾನು ಅವರಿಗೆ ಆಭಾರಿಯಾಗಿದ್ದೇನೆ ಎಂದು ಸಂತೋಷ ವ್ಯಕ್ತಪಡಿಸಿದರು.