ತುಮಕೂರು : ತುಮಕೂರು ರೇಷ್ಮೆ ಇಲಾಖೆ ಉಪನಿರ್ದೇಶಕರಾದ ಡಾ.ವೈ.ಕೆ.ಬಾಲಕೃಷ್ಣಪ್ಪ ಅವರು ಜಿಲ್ಲಾಡಳಿತದಿಂದ ನೀಡಲಾಗುವ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸರ್ಕಾರಿ ನೌಕರರ ದಿನಾಚರಣೆ ಅಂಗವಾಗಿ ಸರ್ಕಾರಿ ಸೇವೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ನೀಡುವ ಪ್ರಶಸ್ತಿಯನ್ನು ವೈ.ಕೆ.ಬಾಲಕೃಷ್ಣಪ್ಪನವರಿಗೆ ಗುರುವಾರ ಸರ್ಕಾರಿ ನೌಕರರ ದಿನಾಚರಣೆಯಲ್ಲಿ ಪ್ರದಾನ ಮಾಡಲಾಗುವುದು.
ಉಪವಿಭಾಗಾಧಿಕಾರಿ ವಿ.ಅಜಯ್, ಆರೋಗ್ಯ ಇಲಾಖೆಯ ನರಸಿಂಹಮೂರ್ತಿ ಕೆ.ಎಲ್, ಗ್ರಾಮ ಲೆಕ್ಕಾಧಿಕಾರಿ ನವೀನ್‌ಕುಮಾರ್, ಲ್ಯಾಬ್ ಟೆಕ್ನಿಷಿಯನ್ ಮಂಗಳಗೌರಮ್ಮ, ಪಿಡಿಒ ಶಶಿಧರ್, ಆರ್.ಬೆಟ್ಟೇಗೌಡ, ಸಿ.ಜಯರಾಂ, ಪಶುವೈದ್ಯಾಧಿಕಾರಿ ಡಾ.ಮಂಜುನಾಥ್ ಅವರುಗಳು ಆಯ್ಕೆಯಾಗಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.