ತುಮಕೂರು : ತುಮಕೂರು ಜಿಲ್ಲಾ ಛಲವಾದಿ ಸಂಘಟನೆಗಳ ಒಕ್ಕೂಟದವತಿಯಿಂದ ಮೇ.10ರಂದು ಮಂಗಳವಾರ ಬೆಳಗ್ಗೆ 10:30ಕ್ಕೆ ಎಂ.ಜಿ.ರಸ್ತೆಯ ಬಾಲಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಚಿತ್ರದುರ್ಗದ ಛಲವಾದಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀಬಸವನಾಗೀದೇವ ಶರಣರು ವಹಿಸಲಿದ್ದಾರೆ.ಅಧ್ಯಕ್ಷತೆಯನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ ವಹಿಸಲಿದ್ದು, ಉದ್ಘಾಟನೆಯನ್ನು ಛಲವಾದಿ ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ ಕೆ.ಶಿವರಾಂ ನೆರವೇರಿಸುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ ಅಧ್ಯಕ್ಷ ಕೆ.ಎನ್.ರಾಜಣ್ಣ,ಶಾಸಕರಾದ ಜಿ.ಬಿ.ಜೋತಿಗಣೇಶ್, ಡಿ.ಸಿ.ಗೌರಿಶಂಕರ್,ಪಾಲಿಕೆ ಸದಸ್ಯರಾದ ಶ್ರೀಮತಿ ಪ್ರಭಾವತಿ ಸುಧೀಶ್ವರ್,ಮಾಜಿ ಶಾಸಕ ಡಾ.ರಫೀಕ್ ಅಹಮದ್, ಹರಿಕಥಾ ವಿದ್ವಾನ್ ಡಾ.ಲಕ್ಷ್ಮಣದಾಸ್,ಚಿತ್ರದುರ್ಗದ ಛಲವಾದಿ ಗುರುಪೀಠದ ಅಧ್ಯಕ್ಷರು ಹಾಗೂ ಭೂ ಸೇನಾ ನಿಗಮದ ಮಾಜಿ ಅಧ್ಯಕ್ಷ ಲಕ್ಷ್ಮೀನರಸಿಂಹಯ್ಯ, ಸರಕಾರಿ ಅಭಿಯೋಜಕರಾದ ಎಸ್.ರಾಜಣ್ಣ, ವಕೀಲರು ಹಾಗೂ ಜಿಲ್ಲಾ ಕಾಂಗ್ರೆಸ್ ಎಸ್ಸಿ ಸೆಲ್ ಅಧ್ಯಕ್ಷರಾದ ಬಿ.ಜಿ.ಲಿಂಗರಾಜು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಹೆಚ್.ಅತೀಕ್ ಅಹಮದ್ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ವಿಶೇಷ ಭಾಷಣಕಾರರಾಗಿ ಖ್ಯಾತ ಬರಹಗಾರರಾದ ವಿಠಲ್ ವಗ್ಗನ್ ಮತ್ತು ಕನ್ನಡ ಉಪನ್ಯಾಸಕ ಡಾ.ಗೋವಿಂದರಾಯ ಅವರುಗಳು ಭಾಗವಹಿಸಲಿದ್ದಾರೆ. ಸಮುದಾಯದ ಎಲ್ಲಾ ಮುಖಂಡರು, ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ಸಿಗೊಳಿಸುವಂತೆ ತುಮಕೂರು ಜಿಲ್ಲಾ ಛಲವಾದಿ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.