ಶಿರಾ
ಪಿಂಚಣಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ 72 ಗಂಟೆಗಳಲ್ಲಿ ಆದೇಶ ಪತ್ರ : ತಹಶೀಲ್ದಾರ್ ಮಮತ
ಶಿರಾ : ಸಾಮಾಜಿಕ ಭದ್ರತಾ ಮತ್ತು ಪಿಂಚಣಿ ಯೋಜನೆಯಡಿ 9 ವಿವಿಧ ಮಾಸಿಕ ಪಿಂಚಣಿಗಳ ಅರ್ಹರಿಗೆ 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ತಲುಪಿಸಲು ಹಲೋ, ಕಂದಾಯ ಸಚಿವರೇ ಸಹಾಯವಾಣಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ಸಾರ್ವಜನಿಕರು ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 155245 ಕೆರೆ ಮಾಡಿ ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ಕೋರಿಕೆ ಸಲ್ಲಿಸ ಬಹುದೆಂದು ತಹಶೀಲ್ದಾರ್ ಮಮತ.ಎಂ. ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾಮಾಜಿಕ ಭದ್ರತಾ ಯೋಜನೆ ಸೌಲಭ್ಯ ಕೋರಿಕೆಗಳನ್ನು ಪಡೆದು ಅರ್ಹ ಫಲಾನುಭವಿಗಳಿಗೆ 72 ಗಂಟೆಗಳಲ್ಲಿ ಮಂಜೂರಾತಿ ಆದೇಶ ಪತ್ರ ವಿತರಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.