ಶಿರಾದಲ್ಲಿ ಎಎಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಶಿರಾ : ರಾಜ್ಯದಲ್ಲಿ ಕಳೆದ 75 ವರ್ಷಗಳಿಂದಲೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಅಧಿಕಾರವನ್ನು ನೋಡಿ ಜನರು ಬೇಸತ್ತಿದ್ದಾರೆ. ದೆಹಲಿಯಲ್ಲಿ ಎಎಪಿ ಪಕ್ಷದ ಅಭಿವೃದ್ಧಿ ಆಡಳಿತಕ್ಕೆ ಜನರು ಒಲವು ತೋರಿದ್ದು, ಮುಂದಿನ ದಿನಗಳಲ್ಲಿ ಗುಜರಾತ್, ಹರಿಯಾಣ ಹಾಗೂ ಹಿಮಾಚಲ್ ರಾಜ್ಯಗಳಲ್ಲೂ ಎಎಪಿ ಪಕ್ಷ ವಿಜಯ ಸಾಧಿಸಿ ಅಧಿಕಾರ ಹಿಡಿಯಲಿದೆ ಎಂದು ಅಮ್ ಆದ್ಮಿ ಪಕ್ಷದ ತಾಲ್ಲೂಕು ಅಧ್ಯಕ್ಷ ಶಶಿಕುಮಾರ್.ಆರ್ ತಿಳಿಸಿದರು.
ಅವರು ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಅಮ್ ಆದ್ಮಿ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ಎಎಪಿ ಸದಸ್ಯತ್ವ ಅಭಿಯಾನದಲ್ಲಿ ಶಿರಾ ತಾಲ್ಲೂಕಿನಲ್ಲಿ 450 ಸದಸ್ಯರಾಗಿದ್ದಾರೆ. ಬರಗೂರು, ಪಟ್ಟನಾಯಕನಹಳ್ಳಿ, ನಾದೂರು, ಕಳ್ಳಂಬೆಳ್ಳ, ತಾವರೆಕೆರೆ ಸೇರಿದಂತೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ. ಎಎಪಿ ಪಕ್ಷವು ಮುಂಬರುವ ಪ್ರತಿಯೊಂದು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸ್ಪರ್ಧೇ ಮಾಡಲಿದೆ. ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಯಾವ ರೀತಿ ಅಭಿವೃದ್ಧಿ ಮಾಡಿದ್ದಾರೆ ಅದೇ ರೀತಿಯಲ್ಲಿ ನಮ್ಮ ರಾಜ್ಯ ಹಾಗೂ ತಾಲ್ಲೂಕು ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ತಾಲ್ಲೂಕಿನಾದ್ಯಂತ ಎಎಪಿ ಪಕ್ಷ ಸಂಘಟನೆ ಮಾಡಿ ಪಕ್ಷ ಬಲಪಡೆಸುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಎಎಪಿ ಪಕ್ಷದ ಕಾರ್ಯದರ್ಶಿ ನವೀನ್ ಕುಮಾರ್, ಕಾನೂನು ಘಟಕ ಎಸ್.ಜಿ.ಜಗದೀಶ್, ಇಂಬ್ರಾಹಿಂ, ದಾವೂದ್ ಪಾಳ್ಯ ಆಸಿಫ್, ಖಾಸಿಮ್ ಸೇರಿದಂತೆ ಹಲವರು ಹಾಜರಿದ್ದರು.