ಕುಣಿಗಲ್
ಹಂದಲಗೆರೆ ಗ್ರಾಮದಲ್ಲಿ ಸರ್ಕಾರಿ ಸಾರ್ವಜನಿಕ ಆರೋಗ್ಯ ಉಪ ಕೇಂದ್ರ ಪ್ರಾರಂಭ
ಕುಣಿಗಲ್ : ಗ್ರಾಮಾಂತರ ಪ್ರದೇಶದ ಸಾರ್ವಜನಿಕರಿಗೆ ಸಣ್ಣಪುಟ್ಟ ಕಾಯಿಲೆಗಳನ್ನು ತೋರಿಸಿಕೊಳ್ಳಲು ಅನುಕೂಲವಾಗಲೆಂದು ಸರ್ಕಾರದ ಆದೇಶದಂತೆ ಸಾರ್ವಜನಿಕ ಆಸ್ಪತ್ರೆಯ ಉಪಕೇಂದ್ರಗಳು ಪ್ರಾರಂಭವಾಗುತ್ತಿವೆ ಇವುಗಳ ಉಪಯೋಗ ಪಡೆದುಕೊಳ್ಳಿ ಎಂದು ಜಿನ್ನಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ|| ನವೀನ್ ತಿಳಿಸಿದರು.
ತಾಲ್ಲೂಕಿನ ಅಮೃತೂರು ಹೋಬಳಿ ಜಿನ್ನಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧೀನದಲ್ಲಿ ಕೆಲಸ ನಿರ್ವಹಿಸುವ ಹಂದಲಗೆರೆ ಗ್ರಾಮದ ಸರ್ಕಾರಿ ಸಾರ್ವಜನಿಕ ಆರೋಗ್ಯ ಉಪ ಕೇಂದ್ರವನ್ನು ಉದ್ಗಾಟಿಸಿ ಮಾತನಾಡಿ ಜನರು ವಾಸಮಾಡುವ ಅಕ್ಕಪಕ್ಕದ ಪ್ರದೇಶವನ್ನು ಶುಭ್ರವಾಗಿ ಇಟ್ಟುಕೊಳ್ಳಿ, ರೋಗ ರುಜಿನಗಳು ಬಂದಾಗ ನಿರ್ಲಕ್ಷ್ಯ ಮಾಡದೆ ವೈದ್ಯರ ಬಳಿ ತೋರಿಸಿಕೊಳ್ಳಿ, ಉದಾಸೀನ ಮಾಡಿದರೆ ಸಣ್ಣಪುಟ್ಟ ಖಾಯಿಲೆಗಳು ಉಲ್ಬಣಗೊಂಡು ಅನಾರೋಗ್ಯಕ್ಕೆ ತುತ್ತಾಗಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು ಈ ಆರೋಗ್ಯ ಉಪಕೇಂದ್ರ ಹನ್ನೆರಡು ಗ್ರಾಮಗಳನ್ನು ಒಳಗೊಂಡಿದೆ ಉಪ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲು ಸಾದ್ಯವಾಗದ ಪಕ್ಷದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿನ್ನಾಗರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿಕೊಡಿ ಎಂದು ತಿಳಿಸಿದರು.
ಜಿನ್ನಾಗರ ಗ್ರಾ.ಪಂ. ಅಧ್ಯಕ್ಷ ಕುಮಾರ್ ಮಾತನಾಡಿ ಗ್ರಾಮದಲ್ಲಿ ಸರ್ಕಾರಿ ಆರೋಗ್ಯ ಉಪಕೇಂದ್ರ ಪ್ರಾರಂಭವಾಗಿರುವುದರಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದ ಅವರು ಸರ್ಕಾರಿ ಆರೋಗ್ಯ ಉಪಕೇಂದ್ರದ ಕಟ್ಟಡಕ್ಕೆ ತುರ್ತಾಗಿ ನಿವೇಶನಪೇದೆ ಕಟ್ಟಡವನ್ನು ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೆಲವು ಉಪ ಆರೋಗ್ಯ ಕೇಂದ್ರಗಳ ಆರೋಗ್ಯಾಧಿಕಾರಿಗಳು ಜಿನ್ನಾಗರ ಗ್ರಾ.ಪಂ.ನ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಾನ್, ಹಂದಲಗೆರೆ ಅಂಗನವಾಡಿ ಕಾರ್ಯಕರ್ತೆ ಗುಲ್ಜಾರ್ ಹಾಗೂ ಆಶಾಕಾರ್ಯಕರ್ತೆಯರುಮತ್ತಿತರರು ಉಪಸ್ಥಿತರಿದ್ದರು.
ವರದಿ: ರೇಣುಕ ಪ್ರಸಾದ್