ಕುಣಿಗಲ್
ಗಾಂಜಾ ಮಾರಾಟ : ಇಬ್ಬರ ಬಂಧನ
ಕುಣಿಗಲ್ : ಖಚಿತ ಮಾಹಿತಿಯನ್ನು ಆಧರಿಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೋಲಿಸರು ಹಾಗೂ ಅರಣ್ಯ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ
ತಾಲ್ಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ಎಂ ಬೊಮ್ಮನಹಳ್ಳಿ ಗೇಟ್ ಬಳಿಯಿರುವ ತಂಗುದಾಣದಲ್ಲಿ ಮಾದಪ್ಪನಹಳ್ಳಿ ಗ್ರಾಮದ ನಾಗೇಶ್ (46)ಹಾಗೂ ಹುಲಿಯೂರುದುರ್ಗದ ಮತ್ತೊಬ್ಬ ವ್ಯಕ್ತಿ ಸೇರಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಹುಲಿಯೂರುದುರ್ಗ ಪೊಲೀಸ್ ಠಾಣೆ ಪಿಎಸ್ ಐ ಚೇತನ್ ಗೌಡ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಗಾಂಜಾ ಸಮೇತ ಬಂಧಿಸಲು ಯಶಸ್ವಿಯಾಗಿದ್ದಾರೆ.ಬಂಧಿತ ವೇಳೆ 710 ಗ್ರಾಂ ಗಾಂಜಾ ಲಭಿಸಿದೆ. ಆರೋಪಿ ನಾಗೇಶ ಗಾಂಜಾವನ್ನು ಬೆಂಗಳೂರಿನ ಉಲ್ಲಾಳ ರಸ್ತೆ ಬದಿಯಲ್ಲಿ ಮಾರಾಟ ಮಾಡುವ ವ್ಯಕ್ತಿಗಳಿಂದ ತಂದು ಹುಲಿಯೂರುದುರ್ಗ ಸುತ್ತಮುತ್ತ ಮಾರಾಟ ಮಾಡುತ್ತಿದ್ದನು ಎಂದು ಮೂಲಗಳಿಂದ ತಿಳಿದು ಬಂದಿದೆ.ಈ ಸಂಬಂಧ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.