ವಿಶ್ವ ತಂಬಾಕು ರಹಿತ ದಿನಾಚರಣೆ ಜಾಗೃತಿ ಜಾಥಾ : ಶಾಲಾ ಆವರಣದಲ್ಲಿ ಬೀಡಿ ಸಿಗರೇಟ್ ಮಾರುವವರ ಮೇಲೆ ಕ್ರಮ : ನ್ಯಾಯಾಧೀಶ ಸಂದೀಶ್.ಪಿ.ಎಲ್
ಶಿರಾ : ಶಾಲಾ ಆವರಣದಲ್ಲಿ 100 ಮೀಟರ್ ದೂರದಲ್ಲಿ ಯಾವುದೇ ತಂಬಾಕು, ಬೀಡಿ, ಸಿಗರೇಟ್ ಮಾರಾಟ ಮಾಡಬಾರದು. ಈ ನಿಯಮವನ್ನು ಉಲ್ಲಂಘಿಸಿದವರ ಮೇಲೆ ಸಾರ್ವಜನಿಕರು ದೂರು ನೀಡಿದರೆ ಅಂತಹ ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೀಶ್.ಪಿ.ಎಲ್ ಅವರು ಹೇಳಿದರು.
ಅವರು ಆರೋಗ್ಯ ಇಲಾಖೆ ವತಿಯಿಂದ ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವತಂಬಾಕು ರಹಿತ ದಿನಾಚರಣೆ ಹಾಗೂ ಜಾಗೃತಿ ಜಾಥಾ-2022ಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚು ಧೂಮಪಾನಕ್ಕೆ ಹೆಚ್ಚು ದಾಸರಾಗುತ್ತಿರುವುದು ಆತಂಕಕಾರಿಯಾಗಿದ್ದು, ಪೋಷಕರು ತಮ್ಮ ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನವಿಸಿ. ಮಕ್ಕಳು ಯಾವುದೇ ಚಟಗಳಿಗೆ ದಾಸರಾಗದಂತೆ ನೋಡಿಕೊಳ್ಳಬೇಕು ಧೂಮಪಾನದಿಂದ ಧೂಮಪಾನ ಮಾಡುವವರಿಗಷ್ಟೆ ಅಲ್ಲದೆ ಅದರಿಂದ ಅವರ ಅಕ್ಕಪಕ್ಕದಲ್ಲಿರುವವರ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಧೂಮಪಾನ ಮಾಡುವವರು ತಮ್ಮ ಚಟದಿಂದ ಮುಕ್ತರಾಗಿ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಮೋಹನ್.ಸಿ.ಆರ್, ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಾಥ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾದಿಕಾರಿ ಡಾ.ಡಿ.ಎಂ.ಗೌಡ, ವಕೀಲರ ಸಂಘದ ಅಧ್ಯಕ್ಷ ಧರಣೇಶ್ ಗೌಡ, ಖಜಾಂಚಿ ಹೆಚ್.ಗುರುಮೂರ್ತಿ, ಉಪಾಧ್ಯಕ್ಷ ವೈ.ಟಿ.ರಾಮಚಂದ್ರಪ್ಪ, ತಾಲ್ಲೂಕು ವೈದ್ಯರ ಸಂಘದ ಅಧ್ಯಕ್ಷ ಡಾ.ರಾಮಕೃಷ್ಣ, ನಗರ ಆರೋಗ್ಯ ವೈದ್ಯಾಧಿಕಾರಿ ಡಾ.ರಾಬಿಯಾ, ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎನ್.ರಮೇಶ್, ಹಿರಿಯ ಆರೋಗ್ಯ ನಿರೀಕ್ಷಕ ಪಿ.ಎಲ್.ಬಸವರಾಜ್, ರಮಾದೇವಿ, ಆಶಾ ಮೇಲ್ವಿಚಾರಕಿ ಹೇಮ ಸೇರಿದಂತೆ ಹಲವರು ಭಾಗವಹಿಸಿದ್ದರು.