ಗುಬ್ಬಿ
ಗುಬ್ಬಿಯ ಶಿವಸಂದ್ರ ಗೇಟ್ ಬಳಿ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು ಹತ್ತಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭಿರ
ಗುಬ್ಬಿ : ತಾಲೂಕಿನ ದೊಡ್ಡಗುಣಿ ಸಮೀಪದ ಶಿವಸಂದ್ರ ಗೇಟ್ ಬಳಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಕಾರಿನಲ್ಲಿದ್ದ ಗಿರೀಶ್ (37) ವರ್ಷ ಮಾನ್ಯ (17)ವರ್ಷ ಎಂದು ಗುರುತಿಸಲಾಗಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.
ತುಮಕೂರು ಮತ್ತು ಶಿವಮೊಗ್ಗ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಸಂಭವಿಸಿದ ಘಟನೆ ನಡೆದಿದ್ದು,
ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.