ಕುಣಿಗಲ್
ಎಡಿಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕುಣಿಗಲ್ : ರಾಜ್ಯದ ಪ್ರತಿಷ್ಠಿತ ಧಾರ್ಮಿಕ ಕ್ಷೇತ್ರವಾದ ಕುಣಿಗಲ್ ತಾಲ್ಲೂಕಿನ ಎಡಿಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಪೂಜೆ ಸಲ್ಲಿಸಿ ಸ್ವಾಮಿಯ ಆಶೀರ್ವಾದ ಪಡೆದು ಬೆಂಗಳೂರಿಗೆ ತೆರಳಿದರು.
ಮಂಗಳವಾರ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಂತರಾಷ್ಟ್ರೀಯ ಯೋಗ ದಿನ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೈಸೂರಿನಿಂದ ನಾಗಮಂಗಲ ಮಾರ್ಗವಾಗಿ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಎಡೆಯೂರು ಶ್ರೀಸಿದ್ದಲಿಂಗೇಶ್ವರಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆದು ಪುನೀತರಾದರು.
ಈ ಸಂದರ್ಭದಲ್ಲಿ ಬಾಳೇ ಹೊನ್ನೂರು ಶಾಖಾ ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಆರೋಗ್ಯ ಸಚಿವ ಡಾ.ಸುಧಾಕರ್, ಶಾಸಕ ಡಾ.ಹೆಚ್.ಡಿ.ರಂಗನಾಥ್, ಪಿಎಲ್ ಡಿ ಬ್ಯಾಂಕ್ ರಾಜ್ಯಾಧ್ಯಕ್ಷ ಡಿ ಕೃಷ್ಣಕುಮಾರ್ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್, ಎಸ್ಪಿ ರಾಹುಲ್ ಕುಮಾರ್ ತಹಸೀಲ್ದಾರ್ ಮಹಾಬಲೇಶ್ ಮತ್ತಿತರರು ಉಪಸ್ಥಿತರಿದ್ದರು.