ವೃತ್ತಿಪರ ಕೋರ್ಸಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
ತುಮಕೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ಸಾಲ ಯೋಜನೆಯಡಿ 2022-23ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಮತ್ತು ನೀಟ್ ಮೂಲಕ ವೃತ್ತಿಪರ ಕೋರ್ಸ್ಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಬಿ.ಆಯುಷ್, ಬಿ.ಇ, ಬಿ.ಆರ್ಕ್ ಮತ್ತು ಬಿ.ಟೆಕ್ ಪ್ರವೇಶ ಪಡೆಯಲು ಇಚ್ಚಿಸುವ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಸಿಖ್ಖರು, ಬೌದ್ದರು ಮತ್ತು ಪಾರ್ಸಿ ಜನಾಂಗಗಳ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. ಸರ್ಕಾರವು ಅಂಗೀಕರಿಸಿದ ಮತೀಯ ಅಲ್ಪಸಂಖ್ಯಾತ ವರ್ಗಗಳ ಪ್ರವರ್ಗ-1, ಪ್ರವರ್ಗ-2ಬಿ ಮತ್ತು 3ಬಿ ಗುಂಪಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ 8 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಸಿ.ಇ.ಟಿ/ನೀಟ್ ಪರೀಕ್ಷೆಗೆ ಹಾಜರಾಗಿರುವ ಪ್ರವೇಶ ಪತ್ರದ ದೃಢೀಕೃತ ಪ್ರತಿ, ಪಾಸ್‌ಪೋರ್ಟ್ ಸೈe಼ï (ವಿದ್ಯಾರ್ಥಿಯ-03 ಮತ್ತು ತಂದೆ ತಾಯಿಯ-02) ಭಾವಚಿತ್ರಗಳು, ಆಧಾರ್ ಕಾರ್ಡ್, ಪಡಿತರ ಚೀಟಿ ದೃಡೀಕೃತ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ದೃಡೀಕೃತ ಪ್ರತಿ, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ, ಅಂಕಪಟ್ಟಿಗಳ ದೃಡೀಕೃತ ಪ್ರತಿ, ಘೋಷಣಾ ಪತ್ರ (Indemnity bond) ರೂ. 50/-ರ ಛಾಪಾಕಾಗದದೊಂದಿಗೆ ಅರ್ಜಿ ಸಲ್ಲಿಸಬಹುದು.
ಅರ್ಹ ವಿದ್ಯಾರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನು ನಿಗಮದ ವೆಬ್‌ಸೈಟ್ https://kmdconline.karnataka.gov.in ರಲ್ಲಿ ಸಲ್ಲಿಸಬಹುದಾಗಿದೆ. ಅಂತರ್ಜಾಲದ ಮೂಲಕ ಭರ್ತಿ ಮಾಡಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಅರ್ಜಿಯ ಪ್ರತಿಯನ್ನು ಪ್ರಿಂಟ್‌ಔಟ್ ಪಡೆದು ಸಂಬAಧಿಸಿದ ಅವಶ್ಯ ದಾಖಾಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಧಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, “ಶ್ರೀ ಸಿದ್ದಲಿಂಗೇಶ್ವರ ನಿಲಯ” ಕೃಷ್ಣಾನಗರ, 8ನೇ ಕ್ರಾಸ್, ಕೆ.ಎಸ್.ಎಫ್.ಸಿ ಎದುರು ರಸ್ತೆ, ತುಮಕೂರು ಇವರಿಗೆ ಜುಲೈ 20ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: 0816-2281023ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.