ತುರುವೇಕೆರೆ
ಕೃಷಿ ಪಂಡಿತ್ ಪ್ರಶಸ್ತಿಗೆ ಅರ್ಜಿ ಆಹ್ವಾನ : ಸಹಾಯಕ ಕೃಷಿ ನಿರ್ದೇಶಕಿ ಬಿ.ಪೂಜಾ
ತುರುವೇಕೆರೆ : 2022-23 ನೇ ಸಾಲಿಗೆ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ತಾಲೂಕಿನ ಅರ್ಹ ರೈತರು ಹಾಗೂ ಮಹಿಳಾ ರೈತರಿಂದ ಕೃಷಿ ಪಂಡಿತ್ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಬಿ.ಪೂಜಾ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು ಕೃಷಿಯಲ್ಲಿ ರೈತ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ಸಲುವಾಗಿ ಹಾಗು ಇನ್ನಿತರ ಮಹಿಳೆಯರನ್ನೂ ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪಂಡಿತ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೃಷಿ ಕ್ಷೇತ್ರದಲ್ಲಿ ವಿನೂತನ, ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ಸಮುದಾಯದ ಅಭಿವೃದ್ಧಿಗೆ ಅಪಾರಕೊಡುಗೆ ನೀಡುತ್ತಿರುವ ಅರ್ಹ ಮಹಿಳೆಯರು ಜುಲೈ 22 ರೊಳಗೆ ಸಹಾಯಕ ಕೃಷಿ ನಿರ್ದೇಶಕ ಕಚೇರಿಗೆ ಅರ್ಜಿ ಸಲ್ಲಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.