ಜನರ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ಕೆಲಸ ಮಾಡುತ್ತಿದ್ದೇನೆ : ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ
ಕಳ್ಳಿಪಾಳ್ಯ ಗ್ರಾಮದಲ್ಲಿ 1 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ
ಶಿರಾ : ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಅವರ ಬಳಿಯೇ ಹೋಗಿ ಸಮಸ್ಯೆಗಳಲ್ಲಿ ಆಲಿಸಿ ಪರಿಹರಿಸುವ ಕಾರ್ಯ ಮಾಡುತ್ತಿದ್ದೇನೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ಅವರು ಕಳ್ಳಂಬೆಳ್ಳ ಹೋಬಳಿ ಕಳ್ಳಿಪಾಳ್ಯ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಸುಮಾರು 1 ಕೋಟಿ ರೂ. ವೆಚ್ಚದ ಸೇತುವೆ ಕಾಮಗಾರಿಗೆ ಹಾಗೂ ಹಾಲೆನಹಳ್ಳಿ ಗ್ರಾಮದಲ್ಲಿ ಸುಮಾರು 15 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ಹಾಗೂ ಮರುಳಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು 27 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿಪೂಜೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕಳೆದ ವರ್ಷ ಅಜ್ಜೇನಹಳ್ಳಿಯ ಕೆರೆ ಕೋಡಿ ಹರಿದಾಗ ಕೆರೆಗೆ ಬಾಗಿನ ಅರ್ಪಿಸಲು ಗ್ರಾಮಕ್ಕೆ ಆಗಮಿಸಿದ್ದಾಗ ಸಂದರ್ಭದಲ್ಲಿ ಇಲ್ಲಿನ ಜನತೆ ಅಜ್ಜೇನಹಳ್ಳಿಯಿಂದ ಕಳ್ಳಿಪಾಳ್ಯಕ್ಕೆ ಹೋಗುವ ದಾರಿ ಮಧ್ಯೆ ಹಳ್ಳ ಹರಿಯುತ್ತಿದ್ದು, ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಮನವಿ ಮಾಡಿದ್ದರು. ಈ ನಿಟ್ಟಿನಲ್ಲಿ ಜನತೆ ಅನುಕೂಲಕ್ಕಾಗಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 1 ಕೊಟಿ ರೂ. ಅನುದಾನದಲ್ಲಿ ಸೇತುವೆ ನಿರ್ಮಿಸಲು ಇಂದು ಭೂಮಿ ಪೂಜೆ ನೆರವೇರಿಸಿದ್ದೇನೆ. ಶಾಸಕನಾದ ಅಲ್ಪ ಅವಧಿಯಲ್ಲಿಯೇ ನನ್ನ ಶಕ್ತಿ ಮೀರಿ ಜನರ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿಯೂ ತಾಲ್ಲೂಕಿನಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಎಸ್‌ಆರ್ ಗೌಡ, ಮುಖಂಡರಾದ ಮುದಿಮಡು ಹೊನ್ನೇಶ್ ಗೌಡ, ಲೋಕೋಪಯೋಗಿ ಇಲಾಖೆಯ ಎಇಇ ಮಲ್ಲೇಶ್, ಮಾಜಿ ತಾ.ಪಂ. ಉಪಾಧ್ಯಕ್ಷ ರಂಗನಾಥ ಗೌಡ, ಕಳ್ಳಿಪಾಳ್ಯ ನಾಗರಾಜು, ಶಿವಣ್ಣ, ರಂಗನಾಥಪ್ಪ , ಭೂಪಸಂದ್ರ ರಾಜಣ್ಣ ಗಂಗಾಧರ್ , ಬಾಲೇನಹಳ್ಳಿ ಲೋಕೇಶ್, ರವಿಕುಮಾರ್, ಬಸವಂತನಹಳ್ಳಿ ರಂಗನಾಥ್ ಸೇರಿದಂತೆ ಹಲವರು ಹಾಜರಿದ್ದರು.