ರಾಜಕೀಯರಾಜ್ಯ

2023ರ ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ನೇಮಕ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಪ್ರಣಾಳಿಕೆ ರೂಪಿಸಲು ‘ಪ್ರಣಾಳಿಕೆ ಹಾಗೂ ನೀತಿ ನಿರೂಪಣೆ’ ಸಮಿತಿಗೆ ಶಾಸಕ ಜಿ.ಪರಮೇಶ್ವರ ಅವರನ್ನು ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ  ನೇಮಕ ಮಾಡಿದ್ದಾರೆ.

2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಪ್ರತಿಪಕ್ಷ ಕಾಂಗ್ರೆಸ್ ‘ಚುನಾವಣಾ ಪ್ರಣಾಳಿಕೆ, ನೀತಿ(ಪಾಲಿಸಿ) ಮತ್ತು ದೃಷ್ಟಿಕೋನ (ವಿಷನ್) ಸಮಿತಿ’ಯನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದಾರೆ.

ಸಮಿತಿಯ ಉಪಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಹಾಗೂ ಪ್ರೊ.ಕೆ.ಇ.ರಾಧಾಕೃಷ್ಣ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 2023ರ ಮೇ ತಿಂಗಳ ಒಳಗೆ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಕಾಂಗ್ರೆಸ್ ಪಕ್ಷ ತಯಾರಿಯಲ್ಲಿ ತೊಡಗಿದೆ. ಅದರ ಭಾಗವಾಗಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

 

 

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker