ಡಾ.ಜಿ.ಪರಮೇಶ್ವರ್ 71ನೇ ಹುಟ್ಟು ಹಬ್ಬ : ಪರಮೇಶ್ವರ್ ಯುವ ಸೈನ್ಯದಿಂದ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು, ಬ್ರೆಡ್ ವಿತರಣೆ
ತುಮಕೂರು: ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯದ ವತಿಯಿಂದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ 71ನೇ ಹುಟ್ಟು ಹಬ್ಬವನ್ನು ಜಿಲ್ಲಾಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲ, ಬ್ರೆಡ್ ವಿತರಿಸುವ ಮೂಲಕ ಆಚರಿಸಿದರು.
ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯದ ರಾಜ್ಯಾಧ್ಯಕ್ಷ ನಗುತಾ ರಂಗನಾಥ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ಸುಮಾರು ನೂರಾರು ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಿದರು. ಈ ವೇಳೆ ಮಾತನಾಡಿದ ನಗುತಾ ರಂಗನಾಥ್,ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು, ಕೊರಟಗೆರೆ ಕ್ಷೇತ್ರದ ಶಾಸಕರೂ ಆಗಿರುವ ಡಾ.ಜಿ.ಪರಮೇಶ್ವರ್ ಓರ್ವ ಸಜ್ಜನ ರಾಜಕಾರಣಿ,ತಮ್ಮ ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ, ಅವರು ಬದುಕು ಕಟ್ಟಿಕೊಳ್ಳಲ ನೆರವಾಗಿದ್ದಾರೆ.ಐದು ಭಾರಿ ಶಾಸಕರಾಗಿ,ಎರಡು ಬಾರಿ ಸಚಿವರಾಗಿ ಕೆಲಸ ಮಾಡಿದ ಡಾ.ಜಿ.ಪರಮೇಶ್ವರ್,ಉನ್ನತ ಶಿಕ್ಷಣ ಸಿಚಿವರಾಗಿದ್ದ ಕಾಲದಲ್ಲಿ ತುಮಕೂರು ಜಿಲ್ಲೆಗೆ ವಿಶ್ವವಿದ್ಯಾಲಯ ವೊಂದು ಮಂಜೂರು ಮಾಡುವ ಮೂಲಕ, ಕಲ್ಪತರು ನಾಡು,ಶಿಕ್ಷಣ ನಗರಿಯಾಗಿ ಪರಿವರ್ತನೆಗೊಳ್ಳಲು ಕಾರಣರಾಗಿದ್ದಾರೆ. ಅಂತಹವರು ಇನ್ನೂ ಹತ್ತಾರು ವರ್ಷಗಳ ಕಾಲ ಬದುಕಿ,ರಾಜಕೀಯ ಕ್ಷೇತ್ರದಲ್ಲಿ ಮತ್ತಷ್ಟು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಮತ್ತಷ್ಟು ಬಡವರಿಗೆ ನೆರವು ನೀಡುವಂತಾಗಲಿ ಎಂದು ಶುಭ ಹಾರೈಸುವುದಾಗಿ ತಿಳಿಸಿದರು.
ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ ಯುವ ಸೈನ್ಯದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ನಿಧಿಕುಮಾರ್ ಮಾತನಾಡಿ,
ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿಮಾನಿಗಳು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅವರ ಹೆಸರನ್ನು ಜನಮಾನಸದಲ್ಲಿ ಹರಡುವ ಕೆಲಸ ಮಾಡುತ್ತಿದ್ದಾರೆ.ಸಜ್ಜನ ರಾಜಕಾರಣಿ ಎಂದೇ ರಾಜಕೀಯ ವಲಯದಲ್ಲಿ ಕರೆಯಲ್ಪಡುವ ಡಾ.ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕಾಗಿ ಹಗಲರುಳೆನ್ನದೆ ದುಡಿದಿದ್ದಾರೆ.ಅವರ ಸೇವೆಯನ್ನು ಪಕ್ಷ ಗುರುತಿಸಿ,ಮುಂಬರುವ 2023ರ ವಿಧಾನಸಭಾ ಚುನಾವಣೆಯ ಪ್ರಾಣಾಳಿಕೆ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದೆ.ಇವರಿಗೆ ಮತ್ತಷ್ಟು ಅಧಿಕಾರ ದೊರೆಯುವಂತಾಗಲಿ ಎಂಬುದು ನಮ್ಮ ಆಶಯ ಎಂದರು.
ಈ ವೇಳೆ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವಸೈನ್ಯದ ಬಳ್ಳಾರಿ ಜಿಲ್ಲಾಧ್ಯಕ್ಷ ಓಂಕಾರಪ್ಪ,ಚಿತ್ರದುರ್ಗ ಮಹಾಂತೇಶಪ್ಪ,ಕುಣಿಗಲ್ ತಾಲೂಕು ಅಧ್ಯಕ್ಷ ವರದರಾಜು,ಗೌರವಾಧ್ಯಕ್ಷ ಸತೀಶ್,ಸುರೇಶ್, ನರಸಿಂಹರಾಜು, ಪ್ರಭಾಕರ್, ಸಿದ್ದಲಿಂಗಯ್ಯ,ತ್ಯಾಗರಾಜು, ಶ್ರೀನಿವಾಸ್ ಸೇರಿದಂತೆ ಯುವ ಸೈನ್ಯದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.