ಮಧುಗಿರಿ

ಕುಟುಂಬ ಕಲಹ ದಂಪತಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಧುಗಿರಿ : ತಾಲೂಕಿನ ಮಿಡಿಗೇಶಿ ಹೋಬಳಿಯ ಮಲ್ಲನಾಯಕನಹಳ್ಳಿ ಗ್ರಾಮದ ದಂಪತಿ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ.
ಮಲ್ಲನಾಯಕನಹಳ್ಳಿ ಗ್ರಾಮದ ವಾಸಿಗಳಾದ ಬಂಡಿ ನರಸಿಂಹಯ್ಯ (65) ಹಾಗೂ ಹನುಮಕ್ಕ (55) ಎನ್ನಲಾದ ಇವರು ಕ್ರಿಮಿನಾಶಕ ಔಷಧಿ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ದಂಪತಿಗಳು.
ಬುದವಾರ ಬೆಳಿಗ್ಗೆ ಕೆಲಸಕ್ಕೆ ಎಂದು ಹೋದವರು ಸತ್ತಿಗೆನಹಳ್ಳಿ ಸಮೀಪದ ಜಮೀನೊಂದರಲ್ಲಿ ಸಾಂಸಾರಿಕ ಜೀವನದ ಸಣ್ಣ ಜಗಳಕ್ಕೆ ಬೇಸತ್ತು ವಿಷ ಕುಡಿದಿದ್ದಾರೆಂದು ತಿಳಿದು ಬಂದಿದೆ.
ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಮಧುಗಿರಿ ತಾಲೂಕು ಮಿಡಿಗೇಶಿ ಹೋಬಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker