ಶಿರಾ
ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಮೂಡಿಸಲು ಕಾಲ್ನಡಿಗೆ ಜಾಥಾ
ಶಿರಾ : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಸಂಬAಧ ಮತದಾರರಲ್ಲಿ ಜಾಗೃತಿ ಮೂಡಿಸಲು ತಾಲ್ಲೂಕು ಆಡಳಿತದ ವತಿಯಿಂದ ನಗರದ ಹಳೇ ತಾಲ್ಲೂಕು ಕಚೇರಿಯಿಂದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದವರೆಗೆ ಕಾಲ್ನಡಿಗೆ ಜಾಥಾ ಮಾಡಲಾಯಿತು.
ಕಾಲ್ನಡಿಗೆ ಜಾಥಾಕ್ಕೆ ತಹಶೀಲ್ದಾರ್ ಮಮತ ಅವರು ಚಾಲನೆ ನೀಡಿದರು. ಕಂದಾಯ ಇಲಾಖೆ, ನಗರಸಭೆ, ತಾಲ್ಲೂಕು ಪಂಚಾಯಿತಿಯ ಎಲ್ಲಾ ಸಿಬ್ಬಂದಿ ವರ್ಗದವರು ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪೌರಾಯುಕ್ತ ಶ್ರೀನಿವಾಸ್, ಗ್ರೇಡ್-2 ತಹಶೀಲ್ದಾರ್ ಆರ್.ವಿ.ಮಂಜುನಾಥ್, ಕಸಬಾ ಕಂದಾಯ ನಿರೀಕ್ಷಕ ಮಂಜುನಾಥ್ ಸೇರಿದಂತೆ ಹಲವರು ಭಾಗವಹಿಸಿದ್ದರು.