ತುಮಕೂರು

ಯಶಸ್ವಿನಿ ಯೋಜನೆಯಲ್ಲಿ ರೈತರು ಸಹಕಾರ ಸಂಘಗಳ ಮೂಲಕ ಸದಸ್ಯತ್ವ ನೊಂದಾಯಿಸಿ, ಆರೋಗ್ಯ ವಿಮಾ ಸೌಲಭ್ಯ ಪಡೆಯಿರಿ : ಕೆ.ಎನ್ ರಾಜಣ್ಣ

ತುಮಕೂರು : ರಾಜ್ಯ ಸರಕಾರದಿಂದ ಪುನರ್ ಸ್ಥಾಪಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾಯೋಜನೆ ಅಡಿಯಲ್ಲಿ ಸಹಕಾರ ಸಂಘಗಳ ಮೂಲಕ ಜಿಲ್ಲೆಯ ಹೆಚ್ಚು ಮಂದಿ ರೈತರು ಸದಸ್ಯತ್ವ ನೊಂದಾಯಿಸಬೇಕೆಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.
ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಯಶಸ್ವಿನಿ ಯೋಜನೆಯಡಿ ನೊಂದಾಯಿತ ನೆಟ್ವರ್ಕ್ ಆಸ್ಪತ್ರೆಗಳಲ್ಲಿ1650 ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಪ್ರತಿ ಕುಟುಂಬಕ್ಕೆ 5 ಲಕ್ಷ ರೂ ವರೆಗೆ ಆರೋಗ್ಯ ವಿಮಾ ಸೌಲಭ್ಯವಿದೆ.ಪ್ರತಿಯೊಬ್ಬರು ಈ ಸೌಲಭ್ಯ ಪಡೆಯಬೇಕೆಂದರು. ಪರಿಶಿಷ್ಟ ಜಾತಿಪರಿಶಿಷ್ಟ ಪಂಗಡದ ಸದಸ್ಯರುಗಳಿಗೆ ವಾರ್ಷಿಕ ವಂತಿಕೆ ಪಾವತಿಗೆ ವಿನಾಯಿತಿ ಇದೆ ಹೆಚ್ಚಿನ ಮಾಹಿತಿಗಾಗಿ ಡಿಸಿಸಿ ಬ್ಯಾಂಕ್ ಶಾಖೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.

ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಯಶಸ್ವಿನಿ ಯೋಜನೆಯನ್ನು ಜಾರಿಗೆ ತಂದಿದ್ದರು.ಆ ನಂತರ ಅದು ಸ್ಥಗಿತಗೊಂಡಿತ್ತು. 2019ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ತುಮಕೂರಿನಲ್ಲಿ ನಡೆದ ಸಹಕಾರಿ ಸಮಾವೇಶದಲ್ಲಿ ಯಶಸ್ವಿನಿ ಮರು ಸ್ಥಾಪನೆಗೆ ಆಗ್ರಹಿಸಲಾಗಿತ್ತು.ಇದಕ್ಕೆ ಸ್ಪಂದಿಸಿದ್ದ ರಾಜ್ಯ ಸರಕಾರ ಯಶಸ್ವಿನಿ ಮರು ಜಾರಿಗೆ ಮುಂದಾಗಿದೆ.1-1-2023ರಿಂದ ಯೋಜನೆ ಜಾರಿಗೆ ಬರಲಿದೆ.ಇದಕ್ಕಾಗಿ ಮುಖ್ಯಮಂತ್ರಿಗಳು ಸಹಕಾರ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ಯಶಸ್ವಿನಿ ಯೋಜನೆ ಮತ್ತೆ ಜಾರಿಗೆ ತಂದಿರುವುದು ಅಭಿನಂದನೀಯ ಎಂದು
ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಯಶಸ್ವಿನಿ ಯೋಜನೆಯಲ್ಲಿ ನೊಂದಾಯಿಸಿದ ರೈತರು ಮತ್ತು ಸಹಕಾರಿಗಳು ಸುಮಾರು 1650 ಖಾಯಿಲೆಗಳಿಗೆ ಸಂಬಂಧಿಸಿದಂತೆ 850 ಕ್ಕೂ ಹೆಚ್ಚು ಸುಸಜ್ಜಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂಗಳವರೆಗೆಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ. ಹಾಗಾಗಿ ಎಲ್ಲಾ ರೈತರು ತಮ್ಮ ಹತ್ತಿರದ ವಿ.ಎಸ್.ಎಸ್.ಎನ್.ಕಚೇರಿಯಲ್ಲಿ ಹೆಸರು ನೊಂದಾಯಿಸಿ, ಯಶಸ್ವಿನಿ ಯೋಜನೆಯ ಲಾಭ ಪಡೆದುಕೊಳ್ಳಬಹುದು.ಯಶಸ್ವಿನಿ ಯೋಜನೆಗೆ ನೋಂದಾಯಿಸಲು ಪರಿಶಿಷ್ಟ ಜಾತಿ ಮತ್ತು
ಪಂಗಡದ ಫಲಾನುಭವಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆಯವರಿಗೆ 500 ರೂ ನಿಗಧಿ ಪಡಿಸಲಾಗಿದೆ.ಹೆಚ್ಚು ಜನರು ಇದರ ಲಾಭ ಪಡೆದುಕೊಳ್ಳುವಂತೆ ರಾಜಣ್ಣ ಕರೆ ನೀಡಿದರು.
ವಿಪಕ್ಷದ ನಾಯಕ ಸಿದ್ದರಾಮಯ್ಯನವರು ರಾಜ್ಯದ 224 ಕ್ಷೇತ್ರಗಳಲ್ಲಿ ಯಾವ ಕ್ಷೇತ್ರದಲ್ಲಾದರೂ ಸ್ಪರ್ಧಿಸಬಹುದು. ನಾವು ಈ ಹಿಂದೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲು ಮನವಿ ಮಾಡಿದ್ದೆವು, ತುಮಕೂರು ಜಿಲ್ಲೆಗೆ ಬಂದರೆ ಸಂತೋಷ ಎಂದ ಅವರು,ಮಾಜಿ ಶಾಸಕ ಎಚ್ ನಿಂಗಪ್ಪ ರವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ, ಟಿಕೆಟ್ ನೀಡುವುದು ಬಿಡುವುದು ಹೈಕಮಾಂಡ್ಗೆ ಬಿಟ್ಟದ್ದು, ಆ ಬಗ್ಗೆ ನಾನೇನು ಹೇಳುವುದಿಲ್ಲ ಎಂದರು.

ತುಮಕೂರು ಜಿಲ್ಲೆಯ ಹತ್ತು ತಾಲೂಕುಗಳ 11 ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಈ ಬಾರಿ
ಗೆಲ್ಲುತ್ತದೆ ಎಂಬ ವಿಶ್ವಾಸ ನಮಗಿದೆ ಎಂದ ಅವರು,ಹಾಲಿನ ದರ 10 ರೂ ಬೇಕಾದರೆ
ಹೆಚ್ಚಿಸಲಿ,ಆದರೆ ಕಚೇರಿ ಕೆಲಸಕ್ಕೆ ಸಂಬಳ ಸಾರಿಗೆಗೆ ಆ ಹಣವನ್ನು ಉಪಯೋಗಿಸಬಾರದು, 10
ರೂ ಗಳನ್ನು ಹಾಲು ಉತ್ಪಾದಕರಿಗೆ ನೀಡಬೇಕು ಎಂಬುದು ನಮ್ಮ ಸಲಹೆ.ಹಾಲು ಉತ್ಪಾದಕರ ಸ್ಥಿತಿ
ಕಷ್ಟಕರವಾಗಿದೆ.ಹೀಗಾಗಿ ಎಷ್ಟೇ ಹೆಚ್ಚು ಮಾಡಿದರು ಅದನ್ನು ಉತ್ಪಾದಕರಿಗೆ ನೀಡಬೇಕು,ಶಾಲೆಗಳನ್ನು
ಕೇಸರಿ ಕಾರಣ ಮಾಡಲು ಹೊರಟಿರುವ ಕ್ರಮ ಸರಿಯಲ್ಲ,ಸ್ವಾಮಿ ವಿವೇಕಾನಂದರು ಹೊರದೇಶ
ದಲ್ಲೆಲ್ಲಾ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ ಅಂತಹವರಿಗೆ ಅವಮಾನ ಮಾಡುವುದು
ಸರಿಯಲ್ಲ ಎಂದು ಕೆಎನ್.ರಾಜಣ್ಣ ನುಡಿದರು.
ಮಧುಗಿರಿ ಕ್ಷೇತ್ರದ ಜನ 2023ನೇ ಸಾಲಿನಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು
ಗೆಲ್ಲಿಸಿದರೆ ಮಧುಗಿರಿ ಜಿಲ್ಲೆಯನ್ನಾಗಿ ಮಾಡಿಸಲು ಸರಕಾರಕ್ಕೆ ಒತ್ತಡ ತರುತ್ತೇನೆ, 54 ಕೆರೆಗಳಿಗೂ
ನೀರು ತುಂಬಿಸುತ್ತೇನೆ, ರೈಲ್ವೆ ಕಾಮಗಾರಿಗಳನ್ನು ಸಂಪೂರ್ಣ ಮಾಡಿಸಲು ಶ್ರಮವಹಿಸುವುದರ
ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಕಾಳಜಿ ಇಟ್ಟು ಕೆಲಸ ಮಾಡುತ್ತೇನೆ ಎಂದರು. ಪತ್ರಿಕಾಗೋಷ್ಠಿಯಲ್ಲಿ
ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಜಿ.ಜೆ.ರಾಜಣ್ಣ,ಲಕ್ಷಿö್ಮನಾರಾಯಣ್,ನಾರಾಯಣಗೌಡ, ಸಿಂಗದಹಳ್ಳಿ
ರಾಜಕುಮಾರ್, ಸಹಕಾರ ಇಲಾಖೆಯ ಅಧಿಕಾರಿಗಳಾದ ಎನ್.ವೆಂಕಟೇಶ್,ಶ್ರೀಧರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker