ಶಾಲಾ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಜಾಗೃತಿ ಜಾಥಾ : ಸಾರ್ವಜನಿಕರ ಮೆಚ್ಚುಗೆ
ಪಾವಗಡ : ಸಾರ್ವಜನಿಕರು ಸಂಚಾರಿ ಸುರಕ್ಷತಾ ನಿಯಮಗಳನ್ನು ಖಡ್ಡಾಯವಾಗಿ ಪಾಲಿಸಲು ಮುಂದಾದರೆ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದುಜ್ಞಾನ ಬೋಧಿನಿ ಶಾಲೆಯ ಮುಖ್ಯ ಶಿಕ್ಷಕಿ ಸಂದ್ಯಾಅಭಿಪ್ರಾಯಪಟ್ಟರು.
ಜ್ಞಾನ ಬೋಧಿನಿ ಶಾಲೆ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರಿಗೆ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪಟ್ಟಣದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಮಕ್ಕಳು, ವೃದ್ದರು, ಹಾಗೂ ಮಹಿಳೆಯರು ರಸ್ತೆಯಲ್ಲಿ ಸಂಚರಿಸಲು ಕಷ್ಷಕರವಾಗುತ್ತಿದೆ, ಆರಂಭದಲ್ಲಿಜ್ಞಾನ ಬೋಧನಿ ಶಾಲೆಯ ವಿದ್ಯಾರ್ಥಿಗಳು ಪಟ್ಟಣದ ಪೋಲೀಸ್ ಇಲಾಖೆ ಸಹಕಾರದೊಂದಿಗೆ ಸಾರ್ವಜನಿಕರಿಗೆ ಸೂಕ್ತ ತಿಳುವಳಿಕೆ ಮತ್ತು ಜನಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯಎಂದರು.
ರಸ್ತೆ ಸುರಕ್ಷತಾ ಜಾಗೃತಿ ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು, ಪಟ್ಟಣದ ಜ್ಞಾನ ಬೋಧಿನಿ ಶಾಲೆ ಆವರಣದಿಂದ ಪ್ರಾರಂಭವಾದ ಜಾಗೃತಿಜಾಥಾ ನಾಗರಕಟ್ಟೆ, ಶನೇಶ್ವರ ಸ್ವಾಮಿ ವೃತ್ತ ಮಾರ್ಗವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಾ ಜಾಗೃತಿ ಮೂಡಿಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿತು.
ಜಾಗೃತಿಜಾಥಾ ಕಾರ್ಯಕ್ರಮದಲ್ಲಿ ಪಾವಗಡ ಪೋಲೀಸ್‌ಠಾಣೆಯ ಸಿಪಿಐ ಅಜಯ್ ಸಾರಥಿ ಭಾಗವಹಿಸಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ತಿಳಿಸಿಕೊಟ್ಟರು.
ಈ ಸಂದರ್ಬದಲ್ಲಿ ಜ್ಞಾನ ಬೋಧಿನಿ ಶಾಲೆಯ ಮುಖ್ಯ ಶಿಕ್ಷಕಿ ಸಂಧ್ಯಾ, ಶಕೀಲ್, ಶುಕೂರ್, ಗೀತಾರಮೇಶ್ ಸೇರಿದಂತೆ ಸಿಬ್ಬಂದಿಗಳು ಇದ್ದರು.